ಉತ್ತರ ಪ್ರದೇಶ: ಹತ್ತಾರು ವರ್ಷದಿಂದ ಪ್ರೀತಿಸುತ್ತಿದ್ದ ಹಿಂದೂ ಯುವತಿಯನ್ನು ವರಿಸಲು 34 ವರ್ಷದ ಮುಸ್ಲಿಂ ಯುವಕ ಹಿಂದೂ ಧರ್ಮಕ್ಕೆ ಮತಾಂತರಗೊಂಡಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಸದ್ದಾಂ ಹುಸೇನ್ ಹಿಂದೂ ಧರ್ಮಕ್ಕೆ ಮತಾಂತರ ಗೊಂಡು ತನ್ನ ಹೆಸರನ್ನು ಶಿವಶಂಕರ್ ಸೋನಿ ಎಂಬುದಾಗಿ ಬದಲಿಸಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ದೇವಸ್ಥಾನದಲ್ಲಿ ಮದುವೆ!
ಈ ಪ್ರಕರಣದಲ್ಲಿ ಮೂರು ದಿನಗಳ ಹಿಂದೆ ಮಹಿಳೆಯು, ಸದ್ದಾಂ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಬಸ್ತಿ ಜಿಲ್ಲೆಯ ಕೋತ್ವಾಲಿ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ, ಗರ್ಭಪಾತ ಮಾಡಿಸಲು ಒತ್ತಾಯ ಮತ್ತು ಕೊಲೆ ಬೆದರಿಕೆ ಹಾಕಿದ ಆರೋಪ ಹೊರಿಸಿ ದೂರು ದಾಖಲಿಸಿದ್ದರು. ಆದರೆ, ಈಗ ಇಬ್ಬರೂ ದೇವಸ್ಥಾನವೊಂದರಲ್ಲಿ ಹಿಂದೂ
ಸ್ವಿಚ್ಚೆಯಿಂದ ಮತಾಂತರ!
ಸಂಪ್ರದಾಯದಂತೆ ಸ್ವಇಚ್ಛೆಯಿಂದ ವಿವಾಹವಾಗಿದ್ದಾರೆ. ಸದ್ದಾಂ ತನ್ನ ಹೆಸರನ್ನು ಶಿವಶಂಕರ್ ಸೋನಿ ಎಂದು ಬದಲಿಸಿಕೊಂಡು ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದಾರೆ ಎಂದು ಕೋತ್ವಾಲಿ ಪೊಲೀಸ್ ಠಾಣೆ ಅಧಿಕಾರಿ ದೇವೇಂದ್ರ ಸಿಂಗ್ ಹೇಳಿದ್ದಾರೆ.
ಒತ್ತಡಕ್ಕೆ ಮಣಿದ ಸದ್ದಾಂ!
ಬಸ್ತಿ ನಗರ ಬರ್ಜಾ ನಿವಾಸಿಯಾಗಿರುವ 34 ವರ್ಷದ ಸದ್ದಾಂ ಹುಸೇನ್ 10 ವರ್ಷಗಳಿಂದ ಕೋತ್ವಾಲಿ ಗ್ರಾಮದ 30 ವರ್ಷದ ಮಹಿಳೆಯೊಂದಿಗೆ ಪ್ರೇಮ ಸಂಬಂಧ ಹೊಂದಿದ್ದ. ಇಬ್ಬರೂ ಬೇರೆಬೇರೆ ಧರ್ಮಗಳಿಗೆ ಸೇರಿದವರಾಗಿದ್ದರಿಂದ ಮದುವೆಯಾಗಲು ಸಾಧ್ಯವಾಗಿರಲಿಲ್ಲ. ಮಹಿಳೆಯು ಮದುವೆಯಾಗುವಂತೆ ಸದ್ದಾಂ ಮೇಲೆ ಹಲವು ಬಾರಿ ಒತ್ತಡ ಹೇರಿದ್ದಳು. ಆದರೆ ಸದ್ದಾಂ ಕುಟುಂಬ ಅವಳನ್ನು ಒಪ್ಪಿಕೊಳ್ಳಲು ಸಿದ್ಧರಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.