ಕಾಪು ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವಕ್ಕೆ ನವದುರ್ಗಾ ಲೇಖನ ಯಜ್ಞ ಕಾರ್ಯಕ್ರಮ ಯಶಸ್ವಿ! ಸಚಿವ ರಾಮಲಿಂಗ ರೆಡ್ಡಿ ಅವರನ್ನು ಭೇಟಿಯಾಗಿ ಕಾರ್ಯಕ್ರಮದ ಆಹ್ವಾನ!

  • 29 Jan 2025 03:54:04 PM

ಕಾಪು: ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಪ್ರಯುಕ್ತ ನವದುರ್ಗಾ ಲೇಖನ ಯಜ್ಞ ಆಯೋಜಿಸಲಾಗಿದ್ದು ಬರೆಯುವ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. 

 

ಫೆಬ್ರವರಿ 4 ರಂದು ‘ನವಚಂಡೀಯಾಗ’ ನಡೆಯಲಿದ್ದು, ಇದರ ಪ್ರಯುಕ್ತ 28-01-2025 ರಂದು ಬೆಂಗಳೂರಿನಲ್ಲಿ ಕರ್ನಾಟಕ ಸರ್ಕಾರದ ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗ ರೆಡ್ಡಿ ಅವರನ್ನು ನವದುರ್ಗಾ ಲೇಖನ ಯಜ್ಞ ಸಮಿತಿಯ ಅಧ್ಯಕ್ಷರು ಹಾಗೂ ಉಡುಪಿ ನಿಕಟಪೂರ್ವ ಶಾಸಕರಾದ ಕೆ. ರಘುಪತಿ ಭಟ್ ಅವರು ಭೇಟಿಯಾಗಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.

 

ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯ ಬೆಂಗಳೂರು ಪದಾಧಿಕಾರಿಗಳಾದ ಯತಿರಾಜ್ ಭಂಡಾರಿ, ಬಾಲಚಂದ್ರ ಶೆಟ್ಟಿ, ಪ್ರೇಮನಾಥ್ ಶೆಟ್ಟಿ, ಜಯಪ್ರಕಾಶ್ ಶೆಟ್ಟಿ, ಶಂಕರ್ ಶೆಟ್ಟಿ ಮತ್ತು ಇತರ ಗಣ್ಯ ವ್ಯಕ್ತಿಗಳು ಉಪಸ್ಥಿತರಿದ್ದರು.