ಮಧೂರು, ಕಾಸರಗೋಡು: ಶ್ರೀಕ್ಷೇತ್ರ ಮಧೂರಿನಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ ಮತ್ತು ಮೂದಪ್ಪ ಸೇವೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಫೆಬ್ರವರಿ 7, 2025, ಶುಕ್ರವಾರ ಬೆಳಿಗ್ಗೆ 9:00 ಗಂಟೆಗೆ ಮಧೂರು ಶ್ರೀ ಮದನಂತೇಶ್ವರ ಸಿದ್ದಿವಿನಾಯಕ ದೇವಸ್ಥಾನದಲ್ಲಿ ನಡೆಯಲಿದೆ. ಧಾರ್ಮಿಕ ಗುರುಗಳು ಮತ್ತು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಪ್ರಮುಖ ಅಂಶವಾಗಿರುವ ಆಮಂತ್ರಣ ಪತ್ರಿಕೆ ಬಿಡುಗಡೆಯು ಈ ಪವಿತ್ರ ಉತ್ಸವದ ಬಗ್ಗೆ ಜನತೆಗೆ ಸುವಾಗಿ ನೀಡಲಿದ್ದು, ಹೆಚ್ಚಿನ ಭಕ್ತಾದಿಗಳನ್ನು ಆಕರ್ಷಿಸುವ ನಿರೀಕ್ಷೆಯಿದೆ.
ಶ್ರೀಕ್ಷೇತ್ರ ಮಧೂರಿನ ಅಷ್ಠಬಂಧ ಬ್ರಹ್ಮಕಲಶೋತ್ಸವ ಮತ್ತು ಮೂಡಪ್ಪ ಸೇವೆ ಆಧ್ಯಾತ್ಮಿಕ ಶಕ್ತಿ ಹೆಚ್ಚಿಸುವ ಮಹತ್ವದ ಉತ್ಸವವಾಗಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ಕೃಪೆಗೆ ಪಾತ್ರಾರಾಗಬೇಕಾಗಿ ಆಯೋಜಕರು ಕೋರಿದ್ದಾರೆ. ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮಕ್ಕೆ ಎಲ್ಲರಿಗೂ ಆದರದ ಸ್ವಾಗತ.