ತಮಿಳುನಾಡು: ದೇಶದಲ್ಲಿ ಅತ್ಯಾಚಾರ ಪ್ರಕರಣ, ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಲೇ ಇದೆ. ಅದೆಷ್ಟೋ ಹೆಣ್ಮಕ್ಕಳು ಕಾಮುಕರ ತೃಷೆಗೆ ಬಲಿಯಾದರೂ ಕೂಡಾ ಕಾನೂನು ಮಾತ್ರ ಅವರ ಮೇಲೆ ಯಾವುದೇ ರೀತಿಯ ಕ್ರಮ ತೆಗೆದುಕೊಳ್ಳುತ್ತಿಲ್ಲ. ಇಲ್ಲೊಂದು ವಿಚಿತ್ರ, ಅಮಾನವೀಯ ಘಡನೆ ನಡೆದಿದೆ. ಶಿಕ್ಷಣ ಕಲಿಸುವ, ಭವಿಷ್ಯದಲ್ಲಿ ಮಕ್ಕಳನ್ನು ಉತ್ತಮ ನಾಗರಿಕರನ್ನಾಗಿ ಮಾಡಬೇಕಾದ ಶಿಕ್ಷಕರೇ ಬಾಲಕಿಯ ಮೇಲೆರಗಿ ಅತ್ಯಾಚಾರ ನಡೆಸಿದ್ದಾರೆ.
ಪಾಠ ಕಲಿಸುವ ಗುರುಗಳಿಂದಲೇ ಬಾಲಕಿಯ ಮೇಲೆ ಅತ್ಯಾಚಾರ..!!
ಮೂವರು ಶಿಕ್ಷಕರು ಶಾಲಾ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿಯಲ್ಲಿ ನಡೆದಿದೆ. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಟ್ಟು ದೇಶಕ್ಕೆ ಉತ್ತಮ ಪ್ರಜೆಯಾಗಿ ರೂಪಿಸಬೇಕಾದವರೇ ಪುಟ್ಟ ಬಾಲಕಿ ಎಂದೂ ನೋಡದೆ ಅತ್ಯಾಚಾರವೆಸಗಿ ವಿಕೃತಿ ಮೆರೆದಿದ್ದಾರೆ.
ಹೆಣ್ಣುಮಕ್ಕಳನ್ನು ಗೌರವಿಸಬೇಕು, ಅವರನ್ನು ರಕ್ಷಿಸಬೇಕೆನ್ನುವ ಪಾಠವನ್ನು ಗಂಡು ಮಕ್ಕಳಿಗೆ ಚಿಕ್ಕಂದಿನಿಂದಲೇ ತಿಳಿಸಿಕೊಡಬೇಕಿದ್ದ ಶಿಕ್ಷಕರು ಇಂತಹ ಅಚಾತುರ್ಯವೆಸಗಿದ್ದಾರೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬಳ ಮೇಲೆ ಶಾಲೆಯ ಮೂವರು ಶಿಕ್ಷಕರು ಅತ್ಯಾಚಾರವೆಸಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಈ ಘಟನೆಯು ಪ್ರದೇಶದಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಸಂಬಂಧಿಕರು ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಮೂವರು ಆರೋಪಿಗಳ ಮೇಲೆ ಪ್ರಕರಣ ದಾಖಲು..!!
ಬಾಲಕಿಯ ಮೇಲೆರಗಿದ ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಬಾಲಕಿಯ ತಾಯಿಯ ದೂರಿನ ಆಧಾರದ ಮೇಲೆ ಅವರ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆ ಬಾಲಕಿ ಒಂದು ತಿಂಗಳಿಗೂ ಹೆಚ್ಚು ಕಾಲ ಶಾಲೆಗೆ ಹೋಗಿರಲಿಲ್ಲ.
ಶಾಲೆಯ ಮುಖ್ಯ ಶಿಕ್ಷಕರು ವಿಚಾರಿಸಿದಾಗ, ತಾಯಿ ಆಕೆಯ ಮೇಲೆ ಲೈಂಗಿಕ ಹಲ್ಲೆ ನಡೆಸಿರುವುದಾಗಿ ಬಹಿರಂಗಪಡಿಸಿದ್ದಾರೆ. ಮುಖ್ಯೋಪಾಧ್ಯಾಯರು ತಕ್ಷಣವೇ ಪೊಲೀಸ್ ದೂರು ದಾಖಲಿಸಿ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಗೆ ವರದಿ ಮಾಡುವಂತೆ ಸೂಚಿಸಿದರು. ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಕೃಷ್ಣಗಿರಿಯ ಮಹಿಳಾ ಪೊಲೀಸ್ ತಂಡ ಮೂವರು ಆರೋಪಿ ಶಿಕ್ಷಕರನ್ನು ಬಂಧಿಸಿದ್ದು, ಅವರು ಈಗ 15 ದಿನಗಳ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.