ನಿರುದ್ಯೋಗಿಗಳಿಗೆ ಗುಡ್ ನ್ಯೂಸ್..!! ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ..!!

  • 07 Feb 2025 02:59:52 PM

ಮನುಷ್ಯ ಜೀವನದಲ್ಲಿ ಸುಖವಾಗಿ ಬದುಕಲು, ತನ್ನ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು, ಮೂಲಭೂತ ಅವಶ್ಯಕತೆಗಳನ್ನು ನೀಗಿಸಲು ಉದ್ಯೋಗ ಅನ್ನೋದು ಬೇಕೇ ಬೇಕು. ಆದರೆ ಇಂದಿನ ಕಾಲದಲ್ಲಿ ಅದೆಷ್ಟೇ ಓದಿದ್ದರೂ ಕೂಡಾ ಅದಕ್ಕೆ ಸೂಕ್ತವಾದ ಉದ್ಯೋಗ ಸಿಗದೆ ಅಲೆದಾಡುವಂತಹ ಶಿಕ್ಷಿತರು ಅನೇಕ ಮಂದಿ ಇದ್ದಾರೆ. ಇದೀಗ ಸರಕಾರಿ ಇಲಾಖೆಯಲ್ಲಿ ಉದ್ಯೋಗವಕಾಶ ಇದ್ದು ಅರ್ಜಿ ಸಲ್ಲಿಸುವಂತೆ ಕೋರಲಾಗಿದೆ.

 

ಕೃಷಿ ಇಲಾಖೆಯಿಂದ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಆಹ್ವಾನ..!

 

ಕೃಷಿ ಇಲಾಖೆಯಲ್ಲಿ ತಾಂತ್ರಿಕ ವ್ಯವಸ್ಥಾಪಕರ ಹುದ್ದೆ ಖಾಲಿ ಇದ್ದು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಚಿಕ್ಕಮಗಳೂರಿನ ಶೃಂಗೇರಿ ತಾಲ್ಲೂಕಿನಲ್ಲಿ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅಭ್ಯರ್ಥಿಗಳನ್ನು ನೇಮಕ ಮಾಡಲಾಗುತ್ತದೆ. ತಾತ್ಕಾಲಿಕ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗುತ್ತದೆ. ಅರ್ಜಿ ಸಲ್ಲಿಸಲು ಫೆಬ್ರವರಿ ಹತ್ತು ಕೊನೆಯ ದಿನಾಂಕವಾಗಿದೆ. ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಮಾತ್ರ ಅಪ್ಲೈ ಮಾಡಬಹುದು. 

 

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ಏನು..?

 

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದಾದರೂ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ ಪದವಿ ಮಾಡಿರಬೇಕು. ಕಂಪ್ಯೂಟರ್ ಜ್ಞಾನ ಕೂಡಾ ಅತೀ ಮುಖ್ಯ. ಅರ್ಹತೆ ಮತ್ತು ಆಸಕ್ತಿ ಹಾಗೂ ಕೆಲಸ ಮಾಡುವ ಉತ್ಸಾಹವಿರಬೇಕು. ಇನ್ನು ಈ ಬಗ್ಗೆ ಹೆಚ್ಚಿನ ಮಾಹಿತಿ ಬೇಕಿದ್ದಲ್ಲಿ ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಆತ್ಮವಿಭಾಗದ ಡಿಪಿಡಿ ಪ್ರಿಯಾಂಕ ಅವರನ್ನು ಸಂಪರ್ಕಿಸಬಹುದು.