ಬೆಂಗಳೂರು: ಸರ್ಕಾರಿ ಉದ್ಯೋಗಕ್ಕಾಗಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಕೆಪಿಎಸ್‌ಸಿ ಮಹತ್ವದ ಆದೇಶವನ್ನು ಹೊರಡಿಸಿದೆ. ಮಹತ್ವದ ಆದೇಶ ಏನೆಂದು ಗೊತ್ತೇ? ಪರೀಕ್ಷೆ ಬರೆಯುವಾಗ ನೀಲಿ ಪೆನ್ನು ಬಳಕೆ ಮಾಡಬೇಕೆಂದು ಆದೇಶ ನೀಡಿದ್ದಾರೆ.
ಇನ್ನು ಮುಂದೆ ಬರುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕಡ್ಡಾಯವಾಗಿ ನೀಲಿ ಬಣ್ಣದ ಬಾಲ್ ಪಾಯಿಂಟ್ ಪೆನ್ ಮಾತ್ರ ಬಳಸಬೇಕು. ಮತ್ತು ಕೆಪಿಎಸ್‌ಸಿ ವ್ಯಾಪ್ತಿಯ ಎಲ್ಲಾ ಪರೀಕ್ಷೆಗಳನ್ನು ನೀಲಿ ಪೆನ್ನಿನಲ್ಲಿಯೇ ಬರೆಯಬೇಕು ಎಂದು ತಿಳಿಸಿದೆ.
ಫೆಬ್ರವರಿ 16 ರಿಂದ ನಡೆಯುವ ಎಲ್ಲಾ ಕೆಪಿಎಸ್‌ಸಿ ಪರೀಕ್ಷೆಗಳಲ್ಲಿ ನೀಲಿ ಬಣ್ಣದ ಪೆನ್ನು ಕಡ್ಡಾಯ ಮಾಡಲಾಗಿದೆ. ಇಲ್ಲಿಯವರೆಗೆ ನಡೆದಂತಹ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕಪ್ಪು ಬಣ್ಣದ ಬಾಲ್ ಪಾಯಿಂಟ್ ಪೆನ್ನಿನಿಂದ ಪರೀಕ್ಷೆ ಬರೆಯಬಹುದಾಗಿತ್ತು. ಆದರೆ ಇದೀಗ ಸೂಚನೆಯಲ್ಲಿ ಬದಲಾವಣೆ ಮಾಡಿ, ಕಪ್ಪು ಬಣ್ಣದ ಪೆನ್ನನ್ನು ಬಳಸಬಾರದು ಎಂದು ತಿಳಿಸಿದೆ.
ಕೆಪಿಎಸ್‌ಸಿ ನಡೆಸುವ ಎಲ್ಲಾ ಪರೀಕ್ಷೆಗಳಲ್ಲಿ ಕಡ್ಡಾಯವಾಗಿ ನೀಲಿ ಬಣ್ಣದ ಪೆನ್ನನ್ನು ಮಾತ್ರ ಬಳಸಬೇಕು ಎಂದು ಕರ್ನಾಟಕ ಲೋಕಸೇವಾ ಆಯೋಗವು ಪ್ರಕಟಣೆಯಲ್ಲಿ ತಿಳಿಸಿದ್ದಾರೆ