ರಾಜ್ಯದ ಅನೇಕ ಆಸ್ಪತ್ರೆಗಳಲ್ಲಿ ಔಷಧಿಯ ವಿಚಾರವಾಗಿ ಅವ್ಯವಹಾರಗಳು, ದಂಧೆಗಳು ನಡೆಯುತ್ತಿರುವುದನ್ನು ಕಾಣಬಹುದು. ಬಡವರ ಪಾಲಿಗೆ ಆಶಾಕಿರಣವಾಗುವ ಬದಲು ಹೊಟ್ಟೆಗೆ ಹೊಡೆಯುವ ಕೆಲಸವನ್ನು ಇಂದು ಅನೇಕ ಆಸ್ಪತ್ರೆಗಳು ಮಾಡುತ್ತಿದೆ. ಇದೀಗ ರಾಜ್ಯ ಸರ್ಕಾರವೇ ಮಧ್ಯ ಪ್ರವೇಶಿಸಿ ಇಂತಿಂತ ಸೇವೆಗಳಿಗೆ ಶುಲ್ಕ ನಿಗದಿಪಡಿಸಿದೆ.
ಸಿಟಿ ಸ್ಕ್ಯಾನ್, ಎಂಆರ್‌ಐ ಸ್ಕ್ಯಾನ್ ಗಳಿಗೆ ಶುಲ್ಕ ನಿಗದಿಪಡಿಸಿದ ಸರ್ಕಾರ...!
ಉಚಿತ ರೋಗ ಪತ್ತೆ ಮತ್ತು ಸೇವೆಗಳನ್ನು ಅನುಷ್ಠಾನಗೊಳಿಸಲು ಸಿಟಿ ಸ್ಕ್ಯಾನ್ ಮತ್ತು ಎಂಆರ್‌ಐ ಸೇವೆಗಳನ್ನು ಸರ್ಕಾರಿ ಹಾಗೂ ಖಾಸಗಿ ಸಹಭಾಗಿತ್ವದ ಮಾದರಿಯಲ್ಲಿ ಪಡೆಯಲು ಅನುಮೋದನೆ ನೀಡಲಾಗಿದೆ. ಹದಿನಾಲ್ಕು ಜಿಲ್ಲಾ ಆಸ್ಪತ್ರೆಗಳಲ್ಲಿ ಪ್ರತೀ ಸಿಟಿ ಸ್ಕ್ಯಾನ್ ಗೆ ಸಾವಿರದ ಐನೂರ ಐವತ್ತು ದರದಲ್ಲಿ ಹಾಗೂ ಐದು ಜಿಲ್ಲಾ ಆಸ್ಪತ್ರೆಗಳಲ್ಲಿ ಎಂಆರ್‌ಐ ಪ್ರತೀ ಸ್ಕ್ಯಾನ್ ಗೆ ಮೂರು ಸಾವಿರ ರೂ. ದರವನ್ನು ಖಚಿತಪಡಿಸಲು ಅನುಮೋದನೆ ನೀಡಲಾಗಿದೆ.
PHH ಕಾರ್ಡ್ ಹೊಂದಿರುವ ರೋಗಿಗಳಿಗೆ ಉಚಿತ ಸೇವೆ...!
ಏಳು ವರ್ಷದ ಅವಧಿಗೆ ಟೆಂಡರ್ ಆಹ್ವಾನಿಸಿ ಕ್ರಮ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಏಳು ವರ್ಷದ ಅವಧಿಗೆ ರೂ.222.28 ಕೋಟಿ ರೂ. ವೆಚ್ಚದಲ್ಲಿ ಕ್ರಮ ಕೈಗೊಳ್ಳಲು ಆದೇಶ ಹೊರಡಿಸಲಾಗಿದೆ. ಸ್ಕ್ಯಾನ್ ಮತ್ತು ಎಂಆರ್‌ಐ ಸ್ಕ್ಯಾನ್ ಸೇವೆಗಳಿಗೆ ಕಾರ್ಡ್ ಹೊಂದಿರುವ ರೋಗಿಗಳಿಗೆ ಸಂಪೂರ್ಣ ಉಚಿತವಾಗಿ ಹಾಗೂ ಇತರರಿಗೆ ಶೇಕಡ ಎಪ್ಪತ್ತರಷ್ಟು ಶುಲ್ಕ ವಿಧಿಸಲು ಆದೇಶಿಸಲಾಗಿದೆ.