ಉಡುಪಿ: ಬ್ರಹ್ಮಾವರ ಮೂಲದ ಯುವ ಇಂಜಿನಿಯರ್ ವಿನಯ್ ಕುಮಾರ್ (38) ಗಂಗಾವತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ನಡೆದಿದೆ. ಅವರು ಡೆತ್ ನೋಟ್ ಬರೆದಿಟ್ಟಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಆದರೆ
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ವಿನಯ್ ಕುಮಾರ್ ಗಂಗಾವತಿಯ ಕನಕಗಿರಿ ರಸ್ತೆಯ ಕೃಷಿ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರ ಬಳಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.
ಘಟನೆಯ ಮಾಹಿತಿ ತಿಳಿದ ಕೂಡಲೇ ಗಂಗಾವತಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ದು ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.
ಪೊಲೀಸರು ಡೆತ್ ನೋಟ್ ಮತ್ತು ಅವರ ಮೊಬೈಲ್ ದಾಖಲೆಗಳನ್ನು ಪರಿಶೀಲಿಸುತ್ತಿದ್ದು, ಆತ್ಮಹತ್ಯೆಯ ಹಿಂದಿನ ಕಾರಣವನ್ನು ಪತ್ತೆಹಚ್ಚಲು ತನಿಖೆ ನಡೆಸುತ್ತಿದ್ದಾರೆ. ಈ ದುರ್ಘಟನೆ ಕುಟುಂಬಸ್ಥರು ಹಾಗೂ ಸ್ನೇಹಿತರಲ್ಲಿ ಆಘಾತ ಮೂಡಿಸಿದೆ.