ಮೈಸೂರು: ಮೈಸೂರಿನ ಉದಯಗಿರಿ ಪೊಲೀಸ್ ಸ್ಟೇಷನ್ ಮೇಲೆ ಸಾವಿರಕ್ಕೂ ಹೆಚ್ಚು ಕಿಡಿಗೇಡಿಗಳು ದಾಳಿ ನಡೆಸಿದ ಪ್ರಕರಣವು ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಈ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
ಈ ದಾಳಿಯಲ್ಲಿ ಭಾಗಿಯಾದವರನ್ನ ಮುಲಾಜಿಲ್ಲದೆ ಬಂಧಿಸಿ, ಅವರ ವಿರುದ್ಧ ಕಠಿಣ ಕ್ರಮ ಕೈ ಗೊಳ್ಳಲು ಪೊಲೀಸರಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.
ಈ ಘಟನೆಯ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಡಿ ಸಿ, ಎಸ್‌ಪಿ ಹಾಗೂ ಪೊಲೀಸ್ ಆಯುಕ್ತರೊಂದಿಗೆ ತುರ್ತು ಸಭೆ ನಡೆಸಿ ಘಟನೆಯನ್ನು ಸಂಪೂರ್ಣವಾಗಿ ಪರಿಶೀಲಿಸಿ ಮಾಹಿತಿ ಪಡೆದಿದ್ದಾರೆ.