ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಮುಖೇನ ಜನರನ್ನು ನಂಬಿಸಿ ಮಂಗ ಮಾಡಿ ಕಾಂಗ್ರೆಸ್ ಅಧಿಕಾರದ ಗದ್ದುಗೆಯೇರಿತ್ತು. ಕಾಲ ಕ್ರಮೇಣ ಇವರ ಸರ್ಕಾರದ ಬೊಕ್ಕಸ ಖಾಲಿಯಾಗುತ್ತಾ ಹೋದಂತೆ, ಆರ್ಥಿಕ ಹೊರೆಯಿಂದ ಕಂಗೆಟ್ಟು ಬೆಲೆ ಏರಿಕೆ, ತೆರಿಗೆ ಹೆಚ್ಚಳದಂತಹ ಬರೆಗಳನ್ನು ಹಾಕುತ್ತಾ ಜನರ ಪ್ರಾಣ ಹಿಂಡುತ್ತಿದ್ದಾರೆ. ಇದೀಗ ಸರ್ಕಾರ ಮತ್ತೆ ರಾಜ್ಯದ ಜನತೆಗೆ ಬಿಗ್ ಶಾಕ್ ನೀಡಿದೆ.
ಗ್ಯಾರಂಟಿ ಯೋಜನೆಗಳು ಇನ್ಮುಂದೆ ಬಡವರಿಗೆ ಮಾತ್ರ...!
ಗ್ಯಾರಂಟಿ ಯೋಜನೆಗಳಿಂದ ಶಾಸಕರ ಅನುದಾನಕ್ಕೆ ಕೂಡಾ ಹೊಡೆತ ಬಿದ್ದಿದೆ ಎಂದು ಹೇಳಲಾಗುತ್ತಿದೆ. ಬೆಲೆ ಏರಿಕೆಯಿಂದ ರೋಸಿ ಹೋಗಿರುವ ಜನರು ನಮಗೆ ಗ್ಯಾರಂಟಿ ಯೋಜನೆಗಳು ಬೇಡ, ಬೆಲೆ ಏರಿಕೆ ನಿಲ್ಲಿಸಿ ಎಂದು ಬೊಬ್ಬಿಡುತ್ತಿದ್ದಾರೆ.
ಗೃಹ ಸಚಿವ ಜಿ.ಪರಮೇಶ್ವರ್ ಅವರು ನೀಡಿರುವ ಹೇಳಿಕೆ ಸಖತ್ ಸದ್ದು ಮಾಡುತ್ತಿದೆ. ಅವರು ಸರ್ಕಾರದ ಯೋಜನೆಗಳನ್ನು ಉದ್ದೇಶಿಸಿ `ಗ್ಯಾರಂಟಿ ಯೋಜನೆಗಳು ಕೇವಲ ಬಡವರಿಗೆ ಮಾತ್ರ ದಕ್ಕುವಂತಾಗಬೇಕು. ಈ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳನ್ನು ಮರುಪರಿಶೀಲಿಸಲು ಸರ್ಕಾರದ ಹಂತದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ. ಬಿಪಿಎಲ್ ಕಾರ್ಡ್ ಮಾನದಂಡವಾಗಿಟ್ಟುಕೊಂಡು ಅವರಿಗೆ ಮಾತ್ರ ಈ ಸೌಲಭ್ಯ ದಕ್ಕಬೇಕು.
ವಿರೋಧ ಪಕ್ಷ ಬಿಜೆಪಿಗೆ ಆಹಾರವಾದ ಕಾಂಗ್ರೆಸ್ ನ `ಗ್ಯಾರಂಟಿ'...!
ರಾಜ್ಯ ಸರ್ಕಾರದ ಯೋಜನೆಗಳನ್ನು ಬಿಜೆಪಿ ಯಾವಾಗಲೂ ಟೀಕೆ ಮಾಡುತ್ತಲೇ ಬಂದಿದೆ. ಈ ಬಗ್ಗೆ ವ್ಯಂಗ್ಯವಾಡಿದ್ದ ಬಿಜೆಪಿ `ಸಿಎಂ ಸಿದ್ಧರಾಮಯ್ಯನವರು ಚುನಾವಣೆಗೂ ಮುನ್ನ ಕಾಕಾ ಪಾಟೇಲ್ ಗೂ ಫ್ರೀ, ಮಹಾದೇವಪ್ಪ ನಿಂಗೂ ಫ್ರೀ ಎಂದು ಪುಂಗಿ ಊದಿ ರಾಜ್ಯದ ಜನರ ಕಿವಿ ಮೇಲೆ ಕಂಡೀಷನ್ ಅಪ್ಲೈ ಎನ್ನುವ ಹೂವನ್ನು ಲೀಲಾಜಾಲವಾಗಿ ಇಟ್ಟಿದ್ದಾರೆ ಎಂದು ಹೇಳಿದ್ದರು.