ಚಿಕ್ಕ ಮಂಗಳೂರು: ಇತ್ತೀಚೆಗೆ ನಡೆಯುತ್ತಿರುವ ಅಪಘಾತ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಇದರಿಂದ ಸಾವಿನ ಪ್ರಮಾಣ ಕೂಡಾ ಹೆಚ್ಚಾಗುತ್ತಲೇ ಇದೆ. ಇದಕ್ಕೆ ರಾಜಕೀಯ ನಾಯಕರು ಕೂಡಾ ಹೊರತಾಗಿಲ್ಲ. ಇದೀಗ ಬಿಜೆಪಿಗರು ಅಚ್ಚರಿಪಡುವಂತಹ ಒಂದು ದುರ್ಘಟನೆ ನಡೆದಿದೆ.
ಭೀಕರ ಅಪಘಾತದಲ್ಲಿ ನಜ್ಜುಗುಜ್ಹಾದ ಕಾರು..!
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ಕಾರಿಗೆ ಲಾರಿ ಢಿಕ್ಕಿ ಹೊಡೆದಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಈ ಭೀಕರ ಅಪಘಾತದಲ್ಲಿ ಎಲ್ಲರೂ ಪ್ರಾಣಾಪಾಯದಿಂದ ಬಚಾವಾಗಿದ್ದಾರೆ. ಇವರು ಚಿಕ್ಕಮಗಳೂರಿನಿಂದ ಶಿಖಾರಿಪುರದ ಕಡೆಗೆ ಪ್ರಯಾಣ ಮಾಡುತ್ತಿದ್ದರು. ಈ ಸಂದರ್ಭ ದುರ್ಘಟನೆ ನಡೆದಿದೆ. ಕಾರಿನ ಹಿಂಭಾಗಕ್ಕೆ ಲಾರಿ ಢಿಕ್ಕಿ ಹೊಡೆದ ರಭಸಕ್ಕೆ ಅದರ ಹಿಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಲಾರಿ ವಶಕ್ಕೆ, ಚಾಲಕನ ವಿರುದ್ಧ ದಾಖಲಾಯ್ತು ಕೇಸ್...!!
ಇದೀಗ ಅಪಘಾತಕ್ಕೆ ಕಾರಣವಾದ ಲಾರಿಯನ್ನು ವಶಕ್ಕೆ ಪಡೆದು ಪೊಲೀಸರು ಚಾಲಕನ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಅದೃಷ್ಟವಶಾತ್ ಯಾರಿಗೂ ಪ್ರಾಣ ಹಾನಿ ಸಂಭವಿಸಿಲ್ಲ. ವಿಜಯೇಂದ್ರ ಅವರಿಗೆ ಪಕ್ಷದ ಕಡೆಯಿಂದ ನೀಡಿದ ಕಾರು ಇದಾಗಿದ್ದು ಅವರು ಮಾತ್ರ ತನ್ನ ಪರ್ಸನಲ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ಅಧಿಕೃತ ಕಾರಿನಲ್ಲಿ ಅವರ ಫೋಟೋಗ್ರಾಫರ್ ಮತ್ತು ಪಿಎ ಸಂಚರಿಸುತ್ತಿದ್ದರು.