ಮಂಗಳೂರು|ಲೈಂಗಿಕವಾಗಿ ಬಳಸಿಕೊಂಡು, ಹಣ ಪಡೆದು ನಂತರ ಕೈ ಕೊಟ್ಟ ಮಹಿಳಾ ಅಧಿಕಾರಿ...! ನೊಂದ ಯುವಕ ನೇಣಿಗೆ ಶರಣು..!

  • 04 Mar 2025 01:51:32 PM

ಮಂಗಳೂರು: ಇಂದು ಸಮಾಜದಲ್ಲಿ ಹಣಕ್ಕಾಗಿ ಏನೆಲ್ಲಾ ಅಡ್ಡ ದಾರಿಗಳನ್ನು ಹಿಡಿಯುತ್ತಾರೆ. ದುಷ್ಕೃತ್ಯಗಳನ್ನು ಎಸಗುತ್ತಾರೆ. ಲಾಭ ಗಳಿಸುವ ಉದ್ದೇಶದಿಂದ ಇವತ್ತು ಮಾನವನ್ನೂ ಹರಾಜಿಗಿಡುವ ಮಹಿಳೆಯರೂ ನಮ್ಮ ಸುತ್ತಮುತ್ತ ಇದ್ದಾರೆ. ಇದಕ್ಕೆ ಮಹಿಳಾ ಅಧಿಕಾರಿಗಳೂ ಹೊರತಾಗಿಲ್ಲ ಬಿಡಿ. ಇದೀಗ ಮಂಗಳೂರಿನಲ್ಲಿ ನಡೆದ ಒಂದು ಪ್ರಕರಣ ಎಲ್ಲರನ್ನೂ ಹುಬ್ಬೇರಿಸುವಂತೆ ಮಾಡಿದೆ.

 

ಮಹಿಳಾ ಅಧಿಕಾರಿಯಿಂದ ಮೋಸ ಹೋದ ಯುವಕ ನೇಣಿಗೆ ಶರಣು...!!

 

ಸಿಐಎಸ್‌ಎಫ್ ಮಹಿಳಾ ಅಧಿಕಾರಿಯೊಬ್ಬರು ತನ್ನನ್ನು ಲೈಂಗಿಕವಾಗಿ ಬಳಸಿಕೊಂಡು ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ಉತ್ತರ ಪ್ರದೇಶದ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾ. 3ರಂದು ಸೋಮವಾರ ಮಂಗಳೂರಿನ ರಾವ್ ಮತ್ತು ರಾವ್ ಸರ್ಕಲ್ ಬಳಿಯ ಲಾಡ್ಜ್‌ನಲ್ಲಿ ನಡೆದಿದೆ. ಉತ್ತರ ಪ್ರದೇಶದ ಗಾಜಿಪುರದ ಅಭಿಷೇಕ್ ಸಿಂಗ್(40) ಮೃತಪಟ್ಟ ದುರ್ದೈವಿಯಾಗಿದ್ದಾನೆ.

 

ಸಿಐಎಸ್ಎಫ್ ಸಹಾಯಕ ಕಮಾಂಡೆಂಟ್ ಮೋನಿಕಾ ಸಿಹಾಗ್ ಎಂಬ ಮಹಿಳಾ ಅಧಿಕಾರಿಯ ಮೇಲೆ ಈತ ಗಂಭೀರವಾದ ಆರೋಪ ಹೊರಿಸಿದ್ದಾನೆ. ಚೆನ್ನೈನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ್, ಕೆಲವು ದಿನಗಳ ಹಿಂದೆ ಸಹೋದ್ಯೋಗಿಗಳೊಂದಿಗೆ ವಸ್ತುಪ್ರದರ್ಶನವೊಂದರಲ್ಲಿ ಭಾಗವಹಿಸಲು ಮಂಗಳೂರಿಗೆ ಬಂದಿದ್ದರು. ಅವರು ನಗರದ ರಾವ್ ಮತ್ತು ರಾವ್ ವೃತ್ತದ ಬಳಿ ಇರುವ ಲಾಡ್ಜ್‌ವೊಂದರಲ್ಲಿ ತಂಗಿದ್ದರು.

 

ಈಗ ಅದೇ ಲಾಡ್ಜ್ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನು ಸಾವಿಗೂ ಮುನ್ನ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅಭಿಷೇಕ್, ಮೋನಿಕಾ ಸಿಹಾಗ್ ಈಗಾಗಲೇ ವಿವಾಹಿತೆಯಾಗಿದ್ದು, ಆ ವಿಷಯವನ್ನು ಮುಚ್ಚಿಟ್ಟು ತನ್ನೊಂದಿಗೆ ಸಂಬಂಧ ಬೆಳೆಸಿದ್ದರು ಎಂದು ಆರೋಪಿಸಿದ್ದು, ಈ ಸಂಬಂಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಅಭಿಷೇಕ್ ಪೋಸ್ಟ್ ಮಾಡಿದ ವೀಡಿಯೋದಲ್ಲಿ ಏನಿದೆ...??

 

ಆತ್ಮಹತ್ಯೆಗೆ ಮುನ್ನ ಅಭಿಷೇಕ್ ಸಿಂಗ್ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹರಿಬಿಟ್ಟಿದ್ದು, ಅದರಲ್ಲಿ ಮೋನಿಕಾ ಸಿಹಾಗ್ ಅವರು ತನ್ನಲ್ಲಿ ಮದುವೆಯಾಗಿರುವ ವಿಷಯ ತಿಳಿಸಲೇ ಇಲ್ಲ. ಅಲ್ಲದೆ ನನ್ನನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿ ವಂಚಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಮೋನಿಕಾ ಸಿಹಾಗ್ ಈಗಾಗಲೇ ವಿವಾಹಿತೆಯಾಗಿದ್ದು, ಆ ವಿಷಯವನ್ನು ಮುಚ್ಚಿಟ್ಟಿದ್ದಾಳೆ. ಪ್ರೀತಿಯ ನೆಪದಲ್ಲಿ ತನ್ನಿಂದ ದೈಹಿಕ ಸುಖ, ಆರ್ಥಿಕ ಲಾಭ ಪಡೆದು ವಂಚಿಸಿದ್ದಾಳೆ.

 

ಇವಳಿಗೆ ನಾನೇ ಮೊದಲಲ್ಲ. ಹಾಗೆ ಹಲವರ ಜೊತೆಗೆ ಇದೇ ರೀತಿಯ ಸಂಬಂಧ ಇಟ್ಟುಕೊಂಡಿರುವುದು ತಿಳಿದುಬಂದಿದೆ. ಮೋನಿಕಾಗೆ ಎಂಟು ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ತೆಗೆದುಕೊಟ್ಟಿದ್ದೇನೆ. ಮೋನಿಕಾ ಸಿಂಗ್, ಗುಜರಾತಿನ ಅಹ್ಮದಾಬಾದ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಳೆ ಎಂದು ಅಭಿಷೇಕ್ ವಿಡಿಯೋನಲ್ಲಿ ಹೇಳಿಕೊಂಡಿದ್ದಾನೆ. ಈತನ ವೀಡಿಯೋ ಆಧಾರದಲ್ಲಿ CISF ಮೋನಿಕಾ ಸಿಹಾಗ್ ಗೆ ನೋಟೀಸ್ ನೀಡಲಾಗಿದೆ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.