ದ.ಕ: ಇತ್ತೀಚಿನ ದಿನಗಳಲ್ಲಿ ಕೊಲೆ, ಕಳ್ಳತನ ಪ್ರಕರಣಗಳು ಹೆಚ್ಚಾಗಿದೆ. ಅನೇಕರು ಥಟ್ಟನೆ ಶ್ರೀಮಂತರಾಗಲು ಅಡ್ಡ ದಾರಿಯನ್ನು, ಸರಳ ಉಪಾಯವನ್ನು ಹುಡುಕುತ್ತಾರೆ. ಹಣದ ಆಸೆಯಿಂದ ಕಳ್ಳತನಗೈದು ಕಳ್ಳರಾಗುತ್ತಾರೆ. ದ.ಕ ಜಿಲ್ಲೆಯಲ್ಲಂತೂ ಇತ್ತೀಚೆಗೆ ಅನೇಕ ಕಳ್ಳತನ ಪ್ರಕರಣಗಳು ನಡೆದಿದೆ. ಇದೀಗ ಈ ಪ್ರಕರಣದ ಸ್ಟೋರಿ ಕೇಳಿದ್ರೆ ನೀವು ಶಾಕ್ ಆಗೋದು ಗ್ಯಾರಂಟಿ....
33ಸೆಕೆಂಡ್ ನಲ್ಲಿ ಕಾರಿನಲ್ಲಿದ್ದ 33 ಲಕ್ಷ ಮಂಗಮಾಯ....!!
ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಗ್ಲಾಸ್ ಒಡೆದು, 33 ಸೆಕೆಂಡ್‌ನಲ್ಲಿ ಕಾರಿನಲ್ಲಿದ್ದ 33 ಲಕ್ಷ ರು. ಹಣವನ್ನು ಖದೀಮರು ದೋಚಿರುವ ಘಟನೆ ಹಾವೇರಿ ನಗರದಲ್ಲಿ ನಡೆದಿದೆ. ಬಸವೇಶ್ವರ ನಗರದ ಹತ್ತನೇ ಕ್ರಾಸ್‌ನಲ್ಲಿರುವ ಸಂತೋಷ್ ಹಿರೇಮಠ ಎಂಬುವರಿಗೆ ಸೇರಿದ ನಗದು ಇದೀಗ ಕಳ್ಳತನವಾಗಿದೆ.
ಸಂತೋಷ್ ಅವರು ಸಿವಿಲ್ ಕಾಂಟ್ರ‍್ಯಾಕ್ಟರ್ ಆಗಿದ್ದು ಹಾವೇರಿಯ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ದೈನಂದಿನ ವ್ಯವಹಾರಕ್ಕಾಗಿ 33 ಲಕ್ಷ ರೂ. ಹಣವನ್ನು ಸಂಬಂಧಿಕರ ಖಾತೆಯಿಂದ ಚೆಕ್ ಮುಖಾಂತರ ಹಣ ಡ್ರಾ ಮಾಡಿಕೊಂಡಿದ್ದರು. ಡ್ರಾ ಮಾಡಿದ ಹಣವನ್ನು ಕಾರಿನ ಹಿಂಭಾಗದ ಸೀಟಿನಲ್ಲಿಟ್ಟಿದ್ದರು. ಸಂತೋಷ್ ಮನೆ ಮುಂದೆ ಕಾರು ನಿಲ್ಲಿಸಿ, ಕಾರಿನಲ್ಲಿ ಹಣ ಬಿಟ್ಟು ಮನೆಯೊಳಗೆ ಹೋಗಿದ್ದರು. ಮನೆಯಲ್ಲಿ ಊಟ ಮಾಡಿ ವಾಪಸ್ ಸಂಜೆ 5:20ಕ್ಕೆ ಕಾರಿನ ಹತ್ತಿರ ಬಂದು ನೋಡಿದಾಗ ಕಾರಿನ ಗ್ಲಾಸ್ ಒಡೆದು ಹಣ ಕಳ್ಳತನ ಆಗಿರುವುದು ಬೆಳಕಿಗೆ ಬಂದಿದೆ. ಆಗ ಅವರು ಗಾಬರಿಯಾಗಿ ಪೊಲೀಸರಿಗೆ ದೂರು ನೀಡಿದ್ದಾರೆ.
ಅಲ್ಪ ಸಮಯದಲ್ಲಿ ಲಕ್ಷಾಂತರ ಹಣ ದೋಚಿದ್ದು ಹೇಗೆ ಗೊತ್ತಾ..?
2 ಬೈಕ್‌ಗಳಲ್ಲಿ ಬಂದಿದ್ದ 4 ಜನ ಖದೀಮರಲ್ಲಿ ಒಬ್ಬ ಕಾರಿನ ಬಳಿ ಸುತ್ತಾಡಿ, ಕಾರಿನ ಗ್ಲಾಸ್ ಒಡೆದು ಕಾರಿನ ಒಳಹೊಕ್ಕು ಹಣವಿದ್ದ ಬ್ಯಾಗ್ ತೆಗೆದುಕೊಂಡಿದ್ದಾನೆ. ನಂತರ ಬೈಕ್‌ನಲ್ಲಿ ಬಂದ ಮತ್ತೊಬ್ಬ ಖದೀಮ ಆತನನ್ನು ಕರೆದುಕೊಂಡು ಅಲ್ಲಿಂದ ಎಸ್ಕೇಪ್ ಆಗಿದ್ದಾನೆ.
ಕಳ್ಳತನಗೈಯ್ಯುವ ಕೃತ್ಯದ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಎಸ್ಪಿ, ಹೆಚ್ಚುವರಿ ಎಸ್ಪಿ ಹಾಗೂ ಪೊಲೀಸರು, ಬೆರಳಚ್ಚು ತಜ್ಞರು ಪರಿಶೀಲನೆ ನಡೆಸಿದರು. ಇದೀಗ ತನಿಖೆಗಾಗಿ ಪೊಲೀಸರ 3 ವಿಶೇಷ ತಂಡ ರಚನೆಯಾಗಿದ್ದು ಆರೋಪಿಗಳನ್ನು ಶೀಘ್ರವೇ ಪತ್ತೆ ಹಚ್ಚುತ್ತೇವೆ ಎಂದು ಎಸ್ಪಿ ಅಂಶುಕುಮಾರ್ ತಿಳಿಸಿದ್ದಾರೆ.