ಆಂಧ್ರಪ್ರದೇಶ: ಜನಸಾಮಾನ್ಯರಿಗೆ ಪೂರಕವಾಗುವ ರೀತಿಯಲ್ಲಿ ಅನೇಕ ವಿಚಾರಗಳಿಗೆ ಸರ್ಕಾರ ಒಂದಲ್ಲ ಒಂದು ರೀತಿಯ ಯೋಜನೆಗಳನ್ನು, ಸೌಲಭ್ಯಗಳನ್ನು ಕಲ್ಪಿಸುತ್ತಿರುತ್ತದೆ. ಆದರೆ ಇಲ್ಲೊಂದು ವಿಚಿತ್ರ ಘಟನೆ ನಡೆದಿದೆ. ಸಂಸದನೋರ್ವ ಮಹಿಳೆಯರಿಗೆ ಬಂಪರ್ ಆಫರ್ ನೀಡಿದ್ದಾರೆ.
ಮೂರನೇ ಮಗುವಿಗೆ ಜನ್ಮ ನೀಡಿದ್ರೆ ಬಹುಮಾನ ಘೋಷಣೆ..!
ಈ ವಿಚಾರ ಕೇಳಿದ್ರೆ ಇದೆಂಥಾ ವಿಚಿತ್ರ ಎಂದು ಅನಿಸೋದು ಸಹಜ. ಹೌದು. ಆಂಧ್ರಪ್ರದೇಶದ ತೆಲುಗು ದೇಶಂ ಪಕ್ಷದ ಲೋಕಸಭಾ ಸಂಸದ ಮೂರನೇ ಮಗುವಿಗೆ ಜನ್ಮ ನೀಡಿದರೆ ಮಹಿಳೆಯರಿಗೆ ತಲಾ 50000 ರೂ.ಗಳನ್ನು ನೀಡುವುದಾಗಿ ಹೇಳಿದ್ದಾರೆ.
ವಿಜಯನಗರದ ಸಂಸದ ಕಾಳಿಸೆಟ್ಟಿ ಅಪ್ಪಲನಾಯ್ಡು ಅವರು ಗಂಡು ಮಗುವಿಗೆ ಜನ್ಮ ನೀಡಿದ್ರೆ ಆ ಮಹಿಳೆಗೆ ಹಸುವನ್ನು ಬಹುಮಾನವಾಗಿ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ರೆ ಐವತ್ತು ಸಾವಿರ ರೂ. ನೀಡುವುದಾಗಿ ಹೇಳಿದ್ದಾರೆ.
ದಕ್ಷಿಣ ಭಾರತದ ಜನಸಂಖ್ಯೆ ಇಳಿಕೆ- ಕಳವಳ ವ್ಯಕ್ತಪಡಿಸಿದ ಆಂಧ್ರ ಸಂಸದ..!
ಉತ್ತರ ಪ್ರದೇಶ ಮತ್ತು ಬಿಹಾರದಂತಹ ರಾಜ್ಯಗಳಲ್ಲಿ ಯುವ ಜನಸಂಖ್ಯೆ ಹೆಚ್ಚಾದರೆ, ದಕ್ಷಿಣದಲ್ಲಿ ವಯಸ್ಸಾದವರ ಸಂಖ್ಯೆ ಹೆಚ್ಚುತ್ತಿದೆ ಎಂದು ಆಂಧ್ರ ಸಂಸದ ಕಳವಳ ವ್ಯಕ್ತಪಡಿಸಿದರು.
ಈಗಾಗಲೇ ಇಲ್ಲಿನ ಮುಖ್ಯಮಂತ್ರಿ ಮಹಿಳಾ ಉದ್ಯೋಗಿಗಳಿಗೆ ಮಕ್ಕಳ ಸಂಖ್ಯೆಯನ್ನು ಲೆಕ್ಕಿಸದೆ ಹೆರಿಗೆ ರಜೆ ನೀಡಲಾಗುವುದು ಎಂದು ಘೋಷಿಸಿದ್ದಾರೆ. ಮಹಿಳೆಯರನ್ನು ಸಬಲೀಕರಣಗೊಳಿಸಲು ಮತ್ತು ಆಂಧ್ರಪ್ರದೇಶಕ್ಕೆ ಬಲವಾದ ಭವಿಷ್ಯವನ್ನು ನಿರ್ಮಿಸಲು ನಾವು ಬದ್ಧರಾಗಿದ್ದೇವೆ ಎಂದು ಪೋಸ್ಟ್ ಮಾಡಿದ್ದಾರೆ.