ಪುತ್ತೂರು: ಪುತ್ತೂರಿನಲ್ಲಿ ಹೆಚ್ಚುತ್ತಿರುವ ಕಳವು, ದರೋಡೆ ಪ್ರಕರಣಗಳು: ನಾಗರಿಕರಲ್ಲಿ ಆತಂಕ; ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿದ ಬಿಜೆಪಿ ನಿಯೋಗ!

  • 13 Mar 2025 12:16:21 PM

ಪುತ್ತೂರು: ಪುತ್ತೂರು ನಗರದಲ್ಲಿ ಕಳವು, ದರೋಡೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಾಗರೀಕರಲ್ಲಿ ಭೀತಿಯನ್ನುಂಟು ಮಾಡಿದೆ. ಹಗಲು ಹೊತ್ತಿನಲ್ಲೇ ಮನೆ ದರೋಡೆ, ಬೈಕ್ ಮತ್ತು ಕಾರು ಕಳವು ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿ ವರದಿಯಾಗುತ್ತಿದೆ. ಇದರಿಂದ ಸಾರ್ವಜನಿಕ ಜೀವನದಲ್ಲಿ ಭದ್ರತೆಯ ಕೊರತೆ ಉಂಟು ಮಾಡಿದೆ. ನಗರದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗಾಗಿ ಪೊಲೀಸರು ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸುತ್ತಿದ್ದಾರೆ.

 

ಈ ಕುರಿತಾಗಿ ಪೊಲೀಸರು ತಕ್ಷಣ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿ, ಬಿಜೆಪಿ ನಿಯೋಗವು ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿದರು. ಈ ನಿಯೋಗದಲ್ಲಿ ಬಿಜೆಪಿಯ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ, ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿಗಳು ಉಮೇಶ್ ಕೋಡಿಬೈಲು, ಅನಿಲ್ ಗೌಡ ತೆಂಕಿಲ, ಟೌನ್ ಬ್ಯಾಂಕ್ ನಿರ್ದೇಶಕ ರಾಜು ಶೆಟ್ಟಿ, ಪ್ರವೀಣ್ ಬಂಡಾರಿ ಉಪಸ್ಥಿತರಿದ್ದರು. ಪ್ರಮುಖ ಪ್ರದೇಶಗಳಲ್ಲಿ ನಾಕಾಬಂಧಿ, ಪೊಲೀಸರು ರಾತ್ರಿ ಬೀಟ್ ಕಾರ್ಯಾಚರಣೆ ನಡೆಸುವಂತೆ ಆಗ್ರಹಿಸಲಾಯಿತು.

 

ಅಧಿಕಾರಿಗಳು ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಸಾರ್ವಜನಿಕರ ಭದ್ರತೆಗಾಗಿಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು ಹೇಳಿದರು.