ಮೂಡುಬಿದಿರೆ:ಯಾವುದೋ ಜಿಲ್ಲೆಗಳಲ್ಲಿ, ಇತರ ರಾಜ್ಯಗಳಲ್ಲಿ ನಡೆಯುತ್ತಿದ್ದ ಅತ್ಯಾಚಾರ ಪ್ರಕರಣಗಳನ್ನು ಟಿವಿ ಮಾಧ್ಯಮಗಳಲ್ಲಿ ನೋಡುತ್ತಿದ್ದ ನಾವುಗಳು ಇಂದು ನಮ್ಮೂರಿನಲ್ಲೇ ಇಂತಹ ದೌರ್ಜನ್ಯದ ಸತ್ಯ ಘಟನೆಗಳನ್ನು ನೋಡುವಂತಹ ವಿಷಾದನೀಯ ಪರಿಸ್ಥಿತಿ ಎದುರಾಗಿದೆ.
ಹೌದು..ಇತ್ತೀಚೆಗಂತೂ ಹೆಣ್ಮಕ್ಕಳ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳಿಗೆ ನಿಯಂತ್ರಣವೇ ಇಲ್ಲದಂತಾಗಿದೆ. ಮೂಡುಬಿದಿರೆಯಲ್ಲಿ ಇಂತಹುದೇ ಘಟನೆಯೊಂದು ನಡೆದಿದೆ.
ಟ್ಯೂಷನ್ ಮುಗಿಸಿ ಬರುತ್ತಿದ್ದ ಬಾಲಕಿಯ ಮೇಲೆರಗಿದ ತೃಷೆ ರಾಜ...!!
ಟ್ಯೂಷನ್ ಮುಗಿಸಿ ಮನೆಗೆ ಬರುತ್ತಿದ್ದ ಅಪ್ರಾಪ್ತೆಯ ಮೇಲೆ ಯುವಕನೋರ್ವ ಮಾನಭಂಗಕ್ಕೆ ಯತ್ನಿಸಿದ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ. ಮಾರ್ಪಾಡಿ ಗ್ರಾಮದ ಅಲಂಗಾರು ಉಳಿಯ ನಿವಾಸಿ ಪವನ್ ಕುಮಾರ್ ಬಂಧಿತ ಆರೋಪಿಯಾಗಿದ್ದಾನೆ.
ಈತನನ್ನು ಮೂಡುಬಿದಿರೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ತನ್ನ ಕಾಮದಾಹವನ್ನು ತೀರಿಸಿಕೊಳ್ಳಲು ಬಾಲಕಿಯ ಮೇಲೆರಗಿದ ಈತ ಕೃತ್ಯ ನಡೆಸಿ ಎಸ್ಕೇಪ್ ಆಗಿದ್ದಾನೆ. ಬಾಲಕಿಯ ಪೋಷಕರು ನೀಡಿದ ದೂರಿನ ಆಧಾರದಲ್ಲಿ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಡೆದ ಘಟನೆ ಏನು..??
ಬಾಲಕಿಯೋರ್ವಳು ಸಂಜೆ ಟ್ಯೂಷನ್ ಮುಗಿಸಿ ಸೈಕಲ್ ನಲ್ಲಿ ಮನೆಗೆ ಬರುತ್ತಿದ್ದಳು. ಕಾಮುಕ ಪವನ್ ಈಕೆಯನ್ನು ದ್ವಿಚಕ್ರ ವಾಹನದಲ್ಲಿ ಫಾಲೋ ಮಾಡುತ್ತಾ ಹೋಗಿ ನಿರ್ಜನ ಪ್ರದೇಶದಲ್ಲಿ ಆಕೆಯನ್ನು ಅಡ್ಡಗಟ್ಟಿ ಮಾನಭಂಗಕ್ಕೆ ಯತ್ನಿಸಿದ್ದಾನೆ.
ಆತನಿಂದ ತಪ್ಪಿಸಿಕೊಂಡು ಸೈಕಲ್ ಅಲ್ಲೇ ಬಿಟ್ಟು ಓಡಿ ಹೋಗಿ ಮನೆಯವರಿಗೆ ವಿಷಯ ತಿಳಿಸಿದ್ದಾಳೆ. ಎಸ್ಕೇಪ್ ಆಗಿದ್ದ ಈತನ ವಿರುದ್ಧ ಬಾಲಕಿಯ ಪೋಷಕರು ಕೂಡಲೇ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.