ಬೆಂಗಳೂರು: ಹಿಂದೂಪರ ಹೋರಾಟಗಾರ ತೇಜಸ್ ಗೌಡ ಅವರು ನಿನ್ನೆ ನೀಡಿದ ದೂರಿನ ಮೇರೆಗೆ ED ಅಧಿಕಾರಿಗಳು ಇಂದು ಹಲವೆಡೆ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ದೇಶದ ಸುಮಾರು ಎಂಟು ಕಡೆಗಳಲ್ಲಿ ಈ ದಾಳಿ ನಡೆಸಿದ್ದು ಅಕ್ರಮ ಹಣ ವರ್ಗಾವಣೆ ಮತ್ತು ಆರ್ಥಿಕ ಅವ್ಯವಹಾರಗಳಿಗೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆ ಮುಂದುವರಿಯುತ್ತಿದೆ ಎಂದು ತಿಳಿದು ಬಂದಿದೆ.
ನಿನ್ನೆ ತೇಜಸ್ ಗೌಡ ಅವರು ED ಗೆ ಅಧಿಕೃತವಾಗಿ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ, ED ಅಧಿಕಾರಿಗಳು ಕೆಲ ಪ್ರಮುಖ ವ್ಯಕ್ತಿಗಳ ಮನೆ ಮತ್ತು ಕಚೇರಿಗಳ ಮೇಲೆ ಶೋಧ ಕಾರ್ಯ ನಡೆಸಿ ಕೆಲವೊಂದು ಪ್ರಮುಖ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಶೋಧ ಕಾರ್ಯಾಚರಣೆಯ ಭಾಗವಾಗಿ, ರನ್ಯಾ ರಾವ್ ಅವರ ಮನೆಯನ್ನು ದಾಳಿ ನಡೆಸಿದ್ದಾರೆ. ಈ ಕುರಿತು ಇನ್ನಷ್ಟು ಮಾಹಿತಿ ಶೀಘ್ರದಲ್ಲೇ ಬಹಿರಂಗವಾಗುವ ಸಾಧ್ಯತೆಯಿದೆ ಎಂಬ ನಿರೀಕ್ಷೆ ಇದೆ.