ಪುತ್ತೂರು: ಅನ್ಯಕೋಮಿನ ಅಪ್ರಾಪ್ತ ಯುವಕನೊಬ್ಬ ಬಸ್‌ನಲ್ಲಿ ಹಿಂದು ಯುವತಿಯ ಜೊತೆ ಅಸಭ್ಯವಾಗಿ ನಡೆದುಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ. ಇದರಿಂದ ಸಾರ್ವಜನಿಕರಲ್ಲಿ ಆಕ್ರೋಶವನ್ನು ಉಂಟಾಗಿದೆ. ಪುತ್ತೂರಿನಿಂದ ನಗರಕ್ಕೆ ಹೋಗುವ ಬಸ್ನಲ್ಲಿ ಈ ಘಟನೆ ಸಂಭವಿಸಿದ್ದು, ಯುವತಿಯ ದೂರಿನ ಪ್ರಕಾರ ಆತನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು ತಿಳಿದುಬಂದಿದೆ.
ಈ ಘಟನೆಯ ಕುರಿತು ಪುತ್ತೂರು ಮಹಿಳಾ ಠಾಣೆಯಲ್ಲಿ ದೂರು ದಾಖಲಾಯಿತು. ಬಿಜೆಪಿ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ ಹಾಗೂ ಹಿಂದೂಪರ ಸಂಘಟನೆ ಕಾರ್ಯಕರ್ತರು ಠಾಣೆಗೆ ಆಗಮಿಸಿ ತಕ್ಷಣದ ಕ್ರಮಕ್ಕಾಗಿ ಆಗ್ರಹಿಸಿದ್ದಾರೆ.