ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮಾರ್ಚ್ 15ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಂಗಳೂರಿನ ಜಿಲ್ಲಾಧಿಕಾರಿ ಸಂಕೀರ್ಣದಲ್ಲಿರುವ ತಮ್ಮ ಕಚೇರಿಯಲ್ಲಿ ಲಭ್ಯವಿರುತ್ತಾರೆ.
ಜನರು ಈ ಅವಧಿಯಲ್ಲಿ ತಮ್ಮ ಅಹವಾಲುಗಳನ್ನು ಕಚೇರಿಗೆ ಪಡೆದುಕೊಂಡು ಬಂದು ಸಂಸದರಿಗೆ ನೇರವಾಗಿ ಮನವಿ ಸಲ್ಲಿಸಬಹುದು. ಸಂಸದ ಕಚೇರಿಯಿಂದ ಈ ಕುರಿತು ಪ್ರಕಟಣೆ ಬಂದಿದ್ದು, ಸಾರ್ವಜನಿಕರು ತಮ್ಮ ಕುಂದು-ಕೊರತೆಗಳನ್ನು ಪ್ರಸ್ತಾಪಿಸಲು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು.