ಹಾವೇರಿ : ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲೂಕಿನ ಮಾಸೂರು ಗ್ರಾಮದಲ್ಲಿ ನಡೆದ ಸ್ವಾತಿ ಹತ್ಯೆ ಪ್ರಕರಣವನ್ನು ಖಂಡಿಸಿ ಮಾರ್ಚ್ 17, 2025 ರಂದು ಸೋಮವಾರ ಸ್ವಯಂಪ್ರೇರಿತ ಬಂದ್ ಮತ್ತು ಪ್ರತಿಭಟನೆಯನ್ನು ಆಯೋಜಿಸಲಾಗಿದೆ.
ಈ ಕುರಿತಾಗಿ ವಿಶ್ವ ಹಿಂದೂ ಪರಿಷತ್‌ನ ಜಿಲ್ಲಾಕಾರ್ಯದರ್ಶಿಯಾದ ಅನಿಲ್ ಹಲವಾಗಿಲ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.
ಪ್ರತಿಭಟನೆಗೆ ಸ್ಥಳೀಯರು ಹಾಗೂ ಹಿಂದೂ ಪರ ಸಂಘಟನೆಗಳು ಬೆಂಬಲ ನೀಡಿದ್ದು, ನ್ಯಾಯಕ್ಕಾಗಿ ಹೋರಾಟ ಮುಂದುವರಿಯಲಿದೆ ಎಂದು ಹೇಳಿದ್ದಾರೆ.