ಚೆನ್ನೈ: ವಿಶ್ವಪ್ರಸಿದ್ಧ ಸಂಗೀತ ನಿರ್ದೇಶಕರಾದ ಎ.ಆರ್. ರೆಹಮಾನ್ ಅವರಿಗೆ ಇಂದು ಬೆಳಿಗ್ಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಚೆನ್ನೈ ಅಪೋಲೋ ಆಸ್ಪತ್ರೆಗೆ ದಾಖಲು ಮಾದಲಾಗಿದೆ ಎಂದು ತಿಳಿದು ಬಂದಿದೆ.
ಅಲ್ಲಿನ ವೈದ್ಯರು ಹೃದಯ ಸಂಬಂಧಿತ ಎಲ್ಲಾ ಅಗತ್ಯ ಪರೀಕ್ಷೆಗಳನ್ನು ನಡೆಸಿದ ಮೇಲೆ ಕೆಲವು ದಿನಗಳ ಕಾಲ ಅವರು ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಲಿದ್ದಾರೆ ಎಂದು ಹೇಳಿದ್ದಾರೆ. ಆಂಜಿಯೋಗ್ರಾಂ ಶಸ್ತ್ರಚಿಕಿತ್ಸೆಗೆ ಒಳಗಾಗುವ ಸಾಧ್ಯತೆ ಇದೆ ಎಂಬ ಮಾಹಿತಿ ಕೂಡ ಲಭ್ಯವಾಗಿದೆ.
ಸಂಗೀತ ಪ್ರೇಮಿಗಳು ಹಾಗೂ ಅಭಿಮಾನಿಗಳು ಅವರ ಶೀಘ್ರ ಗುಣಮುಖತೆಯಿಗಾಗಿ ಪ್ರಾರ್ಥಿಸುತ್ತಿದ್ದಾರೆ.