ದ.ಕ ,ಉಡುಪಿ: ಹತ್ತನೇ ತರಗತಿಯ ವಾರ್ಷಿಕ ಪರೀಕ್ಷೆಗಳು ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ನಡೆಯಲಿದ್ದು, ಜಿಲ್ಲೆಯ 51 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ಈ ಸಂದರ್ಭಡಾಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.
ವಿದ್ಯಾರ್ಥಿಗಳು ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಮತ್ತು ಗುರುತು ಪತ್ತೆಹಚ್ಚಲು ಅಸಾಧ್ಯವಾಗುಬಿವಂತಹ ರೀತಿಯ ವಸ್ತ್ರಧಾರಣೆ ನಿಶೇದಿಸಲಾಗಿದೆ. ಮೆಟಲ್ ವಾಟರ್ ಬಾಟಲ್ ತರಲು ಅನುಮತಿ ಇಲ್ಲ. ಸಂವೀಕ್ಷಕರ ತಪಾಸಣೆಗೆ ಉತ್ತಮ ರೀತಿಯಲ್ಲಿ ಸಹಕರಿಸುವುದು ಅಗತ್ಯ.
ಪರೀಕ್ಷಾ ಕೇಂದ್ರದ ಸುತ್ತಮುತ್ತ ಸುರಕ್ಷಿತ ಮತ್ತು ನಿಯಮಬದ್ಧ ವಾತಾವರಣ ಕಾಪಾಡಲು ನಿಷೇಧಾಜ್ಞೆಯನ್ನು ಜಾರಿಗೊಳಿಸಿದ್ದು , ಕಾನೂನು ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಸಿದೆ.