ಕಾರ್ಕಳ: ಕೆಲವು ತಿಂಗಳುಗಳ ಹಿಂದೆ ಕಾರ್ಕಳದ ಅಜೆಕಾರಿನಲ್ಲಿ ನಡೆದ ಘಟನೆ ಇದೇ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಅದೇ ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಿದ ಯುವತಿ. ದಿಲೀಪ್ ಹೆಗ್ಡೆ ಎಂಬ ಪ್ರಿಯಕರನ ಸಹಾಯದಿಂದ ಪ್ರತಿಮಾ ತನ್ನ ಪತಿ ಬಾಲಕೃಷ್ಣ ಪೂಜಾರಿ ಅವರಿಗೆ ಸ್ಲೋ ಪಾಯ್ಸನ್ ನೀಡಿ ಕೊಲೆ ಮಾಡಿದ್ದಳು.
ಈ ಕುರಿತು ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಇವರಿಬ್ಬರನ್ನೂ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.
ದಿಲೀಪ್ ಹೆಗ್ಡೆಯ ಜಾಮೀನು ಅರ್ಜಿಯನ್ನೂ ನ್ಯಾಯಾಲಯ ಈ ಮೊದಲೇ ತಿರಸ್ಕರಿಸಿತ್ತು. ಆದರೆ ಇದೀಗ ಪ್ರಮುಖ ಆರೋಪಿ ಪ್ರತಿಮಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೂಡ ಉಡುಪಿ ಸಂಚಾರಿ ಪೀಠದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕರಿಸಿದೆ. ಪತಿಯ ಹತ್ಯೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಆರೋಪ ಹಿನ್ನೆಲೆಯಲ್ಲಿ ಪ್ರತಿಮಾ ಜಾಮೀನಿಗೆ ಅನರ್ಹ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.