ಕಾಸರಗೋಡು: ಕೂಡ್ಲು ಕಾಳ್ಯಂಗಾಡು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಕಾರ್ಯದ ಭಾಗವಾಗಿ ಬಾಲಾಲಯ ಪ್ರತಿಷ್ಠಾ ಮಹೋತ್ಸವ ಭಕ್ತಿಪೂರ್ವಕವಾಗಿ ನೆರವೇರಿತು.
ಈ ಹಿನ್ನಲೆಯಲ್ಲಿ ಕ್ಷೇತ್ರದ ತಂತ್ರಿವರ್ಯರಾದ ಕುಕ್ಕಾಜೆ ಶ್ರೀ ಕೃಷ್ಣ ಗುರೂಜಿಯವರಿಗೆ ಪೂರ್ಣ ಕುಂಭ ಸ್ವಾಗತ ನೀಡುವ ಮೂಲಕ ಗೌರವಿಸಲಾಯಿತು.
ಈ ಪವಿತ್ರ ಸಂದರ್ಭದಲ್ಲಿ ಕ್ಷೇತ್ರದ ಮೊಕ್ತೇಸರ ಅಚ್ಚುತ ಕಾಳ್ಯಂಗಾಡ್, ಧರ್ಮದರ್ಶಿ ನಾರಾಯಣ ಪೂಜಾರಿ, ಜೀರ್ಣೋದ್ಧಾರ ಸಮಿತಿ ಗೌರವ ಸಲಹೆಗಾರ ರಘ ಮೀಪುಗುರಿ, ಗೌರವಾಧ್ಯಕ್ಷ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ, ಅಧ್ಯಕ್ಷ ಮೋಹನ್ ರಾಜ್, ಪ್ರಧಾನ ಕಾರ್ಯದರ್ಶಿ ಹರೀಶ್ ಕೆ.ಆರ್, ಕೋಶಾಧಿಕಾರಿ ಶಾಂತ ಕುಮಾರ್ ಮುಂಡಿತ್ತಡ್ಕ ಸೇರಿದಂತೆ ನೂರಾರು ಭಕ್ತರು ಭಾಗವಹಿಸಿದ್ದರು.