ನಾಳೆ ಕರ್ನಾಟಕ ಬಂದ್: ಅಗತ್ಯ ಸೇವೆಗಳಿಗೆ ವಿನಾಯಿತಿ!

  • 21 Mar 2025 03:42:29 PM

ಮಂಗಳೂರು ,ಬೆಂಗಳೂರು: ನಾಳೆ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ. ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್ ನಡೆಯಲಿದ್ದು, ರಾಜ್ಯದ ಹಲವು ಸಂಘಟನೆಗಳು ಇದಕ್ಕೆ ಬೆಂಬಲ ಸೂಚಿಸಿವೆ. ಈ ಬಂದ್ ರಾಜ್ಯದ ಪ್ರಮುಖ ನಗರಗಳು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜನಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.

 

ಅಗತ್ಯ ಸೇವೆಗಳಾದ ಆಸ್ಪತ್ರೆ, ಮೆಡಿಕಲ್ ಶಾಪ್‌ಗಳು, ಹಾಲು ಮತ್ತು ದಿನಬಳಕೆಯ ಅಟಿಕಟ್ಟಿನ ವಸ್ತುಗಳ ವಿತರಣೆ ಎಂದಿನಂತೆ ನಡೆಯಲಿದೆ. Bengaluru Metro ಸೇವೆಯೂ ಯಾವುದೇ ತೊಂದರೆಯಿಲ್ಲದೆ ಕಾರ್ಯನಿರ್ವಹಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

 

ಆದರೆ, ಸಾರ್ವಜನಿಕ ಹಾಗೂ ಖಾಸಗಿ ವಾಹನಗಳ ಸಂಚಾರಕ್ಕೆ ಅಡ್ಡಿಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮುಂಚಿನ ತಯಾರಿ ಮಾಡಿಕೊಳ್ಳುವುದು ಉತ್ತಮವಾಗಿರುತ್ತದೆ.

 

ನಾಳೆ ನಡೆಯುವ SSLC ಪರೀಕ್ಷೆ ಹಿನ್ನೆಲೆ ಸಾರಿಗೆ ವ್ಯವಸ್ಥೆಯ ಬಗ್ಗೆ ಅನುಮಾನವಿದೆ. KSRTC ಹಾಗೂ BMTC ಸೇರಿದಂತೆ ಇತರ ಸಾರಿಗೆ ಸಂಸ್ಥೆಗಳು ಬಂದ್ ಗೆ ಬೆಂಬಲ ನೀಡುತ್ತವೆಯಾ ಎಂಬುದರ ಕುರಿತು ಇನ್ನೂ ಅಧಿಕೃತ ಘೋಷಣೆ ಮಾಡಲಿಲ್ಲ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಸ್‌ ಸೇವೆ ಮುಂದುವರಿಯುವ ನಿರೀಕ್ಷೆ ಇದ್ದರೂ, ಮುನ್ನೆಚ್ಚರಿಕಾ ಕ್ರಮವಾಗಿ ಪ್ರಯಾಣಿಕರು ಪರ್ಯಾಯ ವ್ಯವಸ್ಥೆ ನೋಡಿಕೊಳ್ಳುವುದು ಉತ್ತಮ.