ಭಾರತದ ಪ್ರಮುಖ ಖಾಸಗಿ ಬ್ಯಾಂಕುಗಳಲ್ಲೊಂದಾದ ಕರ್ನಾಟಕ ಬ್ಯಾಂಕ್ ಇದೀಗ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಉದ್ಯೋಗಾಕಾಂಕ್ಷಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಕಾನೂನು ಅಧಿಕಾರಿ, ಚಾರ್ಟರ್ಡ್ ಅಕೌಂಟೆಂಟ್, ಹಾಗೂ ತಜ್ಞ ಅಧಿಕಾರಿಗಳ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಒಟ್ಟು 75 ಹುದ್ದೆಗಳ ಭರ್ತಿ ಪ್ರಕ್ರಿಯೆ ಕೈಗೊಳ್ಳಲಾಗುತ್ತದೆ.
ಅರ್ಹತಾ ಮಾನದಂಡದ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆಗಳು ನಡೆಯುತ್ತದೆ. ಅಭ್ಯರ್ಥಿಗಳು ಆನ್‌ಲೈನ್ ಸಂದರ್ಶನದಲ್ಲಿ ಪಾಲ್ಗೊಂಡು ಆಯ್ಕೆಯಾಗುವ ಅಭ್ಯರ್ಥಿಗಳು ಮೂರು ವರ್ಷಗಳ ಸೇವಾ ಬಾಂಡ್‌ಗೆ ಸಹಿ ಮಾಡಬೇಕಾಗುತ್ತದೆ. ಬಾಂಡ್ ನ್ನು ಉಲ್ಲಂಘಿಸಿ ಕೆಲಸ ನಿರ್ವಹಿಸದೆ ಇದ್ದಲ್ಲಿ ನಿಗದಿತ ದಂಡವನ್ನು ಪಾವತಿಸಬೇಕಾಗುತ್ತದೆ.