ಉಡುಪಿ, ಸಂತೆಕಟ್ಟೆ: ರಾಷ್ಟ್ರೀಯ ಹೆದ್ದಾರಿ NH66ರ ಸಂತೆಕಟ್ಟೆಯ ಆಶೀರ್ವಾದ ಬಳಿ ಇಂದು ಮಧ್ಯಾಹ್ನ ಭಾರೀ ಅಪಘಾತ ಸಂಭವಿಸಿದೆ. ಸರಕು ಸಾಗಿಸುತ್ತಿದ್ದ ಲಾರಿಗೆ, ಅಚಾನಕವಾಗಿ ಅಡ್ಡ ಬಂದ ಬೈಕನ್ನು ತಪ್ಪಿಸಲು ಯತ್ನಿಸಲು ನೋಡಿದ ಲಾರಿ ಚಾಲಕ ನಿಯಂತ್ರಣ ಕಳೆದುಕೊಂಡು ಲಾರಿ ಪಲ್ಟಿಯಾಗಿದೆ.
ಲಾರಿ ಪಲ್ಟಿಯಾದ ಪರಿಣಾಮ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿದೆ. ಅಪಘಾತದ ಪರಿಣಾಮವಾಗಿ ಹೆದ್ದಾರಿಯಲ್ಲಿ ಸಂಚಾರಕ್ಕೆ ತೊಂದರೆ ಉಂಟಾಗಿದ್ದು, ಪೊಲೀಸರು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಿಸುವ ಕಾರ್ಯ ನಡೆಸಿದ್ದಾರೆ.
ಈ ಘಟನೆ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಅಪಘಾತದಿಂದ ಯಾವುದೇ ಪ್ರಾಣಾಪಾಯವುಂಟಾಗದಿದ್ದರೂ, ಹೆದ್ದಾರಿಯಲ್ಲಿ ಈ ರೀತಿಯ ಘಟನೆಗಳು ಪುನರಾವೃತವಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.