ಪಡುಬಿದ್ರಿ: ಅಕ್ರಮ ಮರಳು ಸಾಗಾಟ; ಟಿಪ್ಪರ್ ವಶ, ಚಾಲಕ ಪರಾರಿ!

  • 24 Mar 2025 02:58:01 PM


ಪಡುಬಿದ್ರಿ: ದ.ಕ ಮತ್ತು ಉಡುಪಿ ಜಿಲ್ಲೆಗಳಲ್ಲಿ ನಿರಂತರವಾಗಿ ನಡೆಯ್ಯುವ ಕಾನೂನುಬಾಹಿರ ಮರಳು ಸಾಗಾಟ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಇತ್ತೀಚೆಗೆ, ಕಾರ್ಕಳದಿಂದ ಪಡುಬಿದ್ರಿ ಜಂಕ್ಷನ್ ಕಡೆಗೆ ಸಾಗುತ್ತಿದ್ದ ಟಿಪ್ಪರ್‌ನಲ್ಲಿ ಅಕ್ರಮ ಮರಳು ಸಾಗಾಟವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

 

 ರಾತ್ರಿ ಗಸ್ತಿನಲ್ಲಿದ್ದ ಪಿಎಸ್ಐ ಪ್ರಸನ್ನ ಅವರ ತಂಡ ಟಿಪ್ಪರ್ ನಿಲ್ಲಿಸಲು ಸೂಚಿಸಿದಾಗ, ಚಾಲಕನು ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ನಿಲ್ಲಿಸದೆ ಸ್ವಲ್ಪ ಮುಂದೆ ಪೆಟ್ರೋಲ್ ಬಂಕ್ ಬಳಿ ವಾಹನ ನಿಲ್ಲಿಸಿ, ತಕ್ಷಣವೇ ಅಲ್ಲಿಂದ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಪೊಲೀಸರು ಆ ಟಿಪ್ಪರನ್ನು ವಶಪಡಿಸಿಕೊಂಡಿದ್ದಾರೆ.

 

 ಮರಳು ಸಾಗಾಟದ ಟಿಪ್ಪರ್ ನಲ್ಲಿ ಸುಮಾರು ಮೂರು ಯೂನಿಟ್‌ಗಳಷ್ಟು (ದಶ ಸಾವಿರ ಮೌಲ್ಯದ) ಮರಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎಂದು ಮಾಹಿತಿ ಲಭ್ಯವಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ಪೊಲೀಸರು ಪರಾರಿಯಾದ ಚಾಲಕನ ಪತ್ತೆಗೆ ತನಿಖೆ ನಡೆಸುತ್ತಿದ್ದಾರೆ.