ಮಂಗಳೂರು: ಖಾಸಗಿ ರೆಸಾರ್ಟ್ ಒಂದರ ಸ್ವಿಮ್ಮಿಂಗ್ ಪೂಲ್‌ನಲ್ಲಿ ಬಿದ್ದು ಪ್ರವಾಸಿಗನ ದಾರುಣ ಸಾವು!

  • 24 Mar 2025 03:24:22 PM

ಮಂಗಳೂರು: ಖಾಸಗಿ ರೆಸಾರ್ಟ್‌ ಒಂದರಲ್ಲಿ ಸ್ನೇಹಿತನೊಂದಿಗೆ ಪ್ರವಾಸಕ್ಕೆ ಬಂದಿದ್ದ ವ್ಯಕ್ತಿಯೊಬ್ಬರು ಸ್ವಿಮ್ಮಿಂಗ್ ಪೂಲ್‌ನಲ್ಲಿ ಬಿದ್ದು ಅಕಸ್ಮಿಕವಾಗಿ ಮೃತಪಟ್ಟ ಘಟನೆ ನಡೆದಿದೆ.

 

ಮೃತರನ್ನು ಕುಶಾಲನಗರ ಮೂಲದ ನಿಶಾಂತ್ ಎಂದು ಗುರುತಿಸಲಾಗಿದೆ. ಅವರು ಚಿಕ್ಕಮಂಗಳೂರಿಗೆ ಗೆಳೆಯನ ಜೊತೆ ಪ್ರವಾಸಕ್ಕೆ ಬಂದಿದ್ದರು.ಪ್ರವಾಸದ ಕ್ಷಣಗಳನ್ನು ಸವಿಯುತ್ತಾ ರೆಸಾರ್ಟ್‌ನ ಪೂಲ್‌ನಲ್ಲಿ ಈಜಲು ಹಾರಿದ ಸಂದರ್ಭದಲ್ಲಿ ಅವರು ತಲೆ ತಿರುಗಿ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

 

ಸ್ಥಳದಲ್ಲಿದ್ದ ಸ್ನೇಹಿತರು ಕೂಡಲೇ ಅವರನ್ನು ಮೇಲಕ್ಕೆತ್ತಿದರು ಸಹ ಆಗಲೇ ಅವರು ಪ್ರಾಣ ಕಳೆದುಕೊಂಡಿದ್ದರು. 

 

ಘಟನೆ ಸಂಬಂಧಿಸಿದ ದೃಶ್ಯಾವಳಿಗಳು ರೆಸಾರ್ಟ್‌ನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈ ಘಟನೆಯು ಪ್ರವಾಸಿಗರಿಗೆ ಎಚ್ಚರಿಕೆಯ ಸಂದೇಶವಾಗಿದ್ದು , ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಸೂಚಿಸಲಾಗಿದೆ.