ಬ್ರಹ್ಮಾವರ: ಅಪಘಾತ ವಲಯವಾಗಿ ಮಾರ್ಪಡುತ್ತಿರುವ ಮಹೇಶ್ ಆಸ್ಪತ್ರೆ ಜಂಕ್ಷನ್ ಹಾಗೂ ಎಸ್‌ಎಂಎಸ್ ಚರ್ಚ್ ಬಳಿ ಇದೀಗ ಎನ್‌ಎಚ್‌ಎಐ (NHAI) ಪ್ರಾಧಿಕಾರವು ಹೊಸ ನಿರ್ಧಾರ ಕೈಗೊಂಡಿದ್ದು, ವಾಹನಗಳ ನಿಯಂತ್ರಿತ ಸಂಚಾರಕ್ಕಾಗಿ ಜೀಬ್ರಾ ಕ್ರಾಸಿಂಗ್‌ಗಳನ್ನು ಅಳವಡಿಸಿದೆ.
ಪ್ರತಿನಿತ್ಯವೂ ದಟ್ಟ ಸಂಚಾರ ಕಂಡುಬರುವ ಈ ಎರಡು ಜಂಕ್ಷನ್‌ಗಳು ಜಿಲ್ಲೆಯಲ್ಲಿ ಬ್ಲ್ಯಾಕ್ ಸ್ಪಾಟ್‌ಗಳಾಗಿ ಗುರುತಿಸಲ್ಪತ್ತಿದೆ. ಇದರ ಹಿನ್ನೆಲೆಯಲ್ಲಿ, ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿ ಇಟ್ಟುಕೊಂಡು ಶನಿವಾರದಂದು ತಹಶೀಲ್ದಾರ್ ಮತ್ತು ಉಪ ವಿಭಾಗೀಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳ ತಂಡವು ಹಿಂದಿನ ಅಪಘಾತಗಳ ಮಾಹಿತಿಯನ್ನು ಸಂಗ್ರಹಿಸಿದರು.
ವಾಹನಗಳ ವೇಗವನ್ನು ಕಡಿಮೆಗೊಳಿಸುವ ಉದ್ದೇಶದಿಂದ ಅಪಘಾತಗಳ ಸಂಖ್ಯೆಯನ್ನು ತಡೆಯುವುದಕ್ಕಾಗಿ ತಕ್ಷಣ ಜೀಬ್ರಾ ಕ್ರಾಸಿಂಗ್ ಅಳವಡಿಕೆ ಮಾಡಲಾಗಿದೆ
ಈ ಹಿನ್ನೆಲೆಯಲ್ಲಿ ರಚಿಸಲಾದ ತಾಂತ್ರಿಕ ಸಮಿತಿಯು ಏಪ್ರಿಲ್ 7ರಂದು ಕಾರ್ಯಸಾಧ್ಯತಾ ವರದಿಯನ್ನು ಸಲ್ಲಿಸಲಿದ್ದು, ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಏಪ್ರಿಲ್ 8ರಂದು ರಾಷ್ಟ್ರೀಯ ಹೆದ್ದಾರಿ ಜಿಲ್ಲಾ ಮಟ್ಟದ ಸಭೆ ನಡೆಯಲಿದೆ ಎಂದು ತಿಳಿದುಬಂದಿದೆ.