ಎರುಮೇಲಿ: ಶಬರಿಮಲೆ ಯಾತ್ರೆಗೆ ತೆರಳುತ್ತಿದ್ದ ಭಕ್ತರ ಬಸ್ ಕೇರಳದ ಎರುಮೇಲಿಯ ಕನಮಲ ಪ್ರದೇಶದ ತಿರುವಿನಲ್ಲಿ ಭೀಕರ ಅಪಘಾತಕ್ಕೊಳಗಾದ ಘಟನೆ ಸಂಭವಿಸಿದೆ.
ಈ ಭಕ್ತರ ಬಸ್ ತೀವ್ರ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಉರುಳಿಬಿದ್ದಿದೆ.
ಘಟನೆಯಲ್ಲಿ ಓರ್ವ ಯಾತ್ರಿಕ ಸ್ಥಳದಲ್ಲೇ ಮೃತಪಟ್ಟಿದ್ದು, ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ತುರ್ತಾಗಿ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇನ್ನು ಬಸ್ಸಿನಲ್ಲಿ ಒಟ್ಟು 35 ಯಾತ್ರಿಕರಿದ್ದರು ಎಂದು ತಿಳಿದುಬಂದಿದ್ದು, ಪ್ರಸ್ತುತ ಕಾರ್ಯಾಚರಣೆ ಮುಂದುವರಿಯುತ್ತಿದೆ. ಅದರಲ್ಲೂ ಹಲವರ ಸ್ಥಿತಿ ಗಂಭೀರ ಎಂಬ ಮಾಹಿತಿ ಲಭಿಸಿದೆ.
ಅಪಘಾತದ ಸುದ್ದಿ ತಿಳಿದ ತಕ್ಷಣ ಸ್ಥಳೀಯ ಪೊಲೀಸರು ಹಾಗೂ ರಕ್ಷಣಾ ದಳದವರು ತಕ್ಷಣ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಆರಂಭಿಸಿದ್ದಾರೆ.
ಗಾಯಾಳುಗಳಿಗೆ ತಕ್ಷಣ ಚಿಕಿತ್ಸೆ ನೀಡಲು ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿದೆ.