ಮಂಗಳೂರಿನಲ್ಲಿ ನಾಳೆ(ಏ.18 )ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ದ ಪ್ರತಿಭಟನೆ – ರಸ್ತೆ ಸಂಚಾರ ನಿರ್ಬಂಧದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ!

  • 17 Apr 2025 11:03:34 PM

ಮಂಗಳೂರು: ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಮುಸ್ಲಿಂ ಸಂಘಟನೆಗಳು ಏಪ್ರಿಲ್ 18ರಂದು ಮಂಗಳೂರು ಹೊರವಲಯದ ಅಡ್ಯಾರ್ ಕಣ್ಣೂರಿನ ಶಾ ಮೈದಾನದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಯೋಜನೆ ಮಾಡಿರುತ್ತದೆ. ಈ ಹಿನ್ನೆಲೆ ಮಂಗಳೂರು ಪೊಲೀಸ್ ಕಮಿಷನರ್ ಅವರಿಂದ ಹೊರಡಿಸಲಾಗಿದ್ದ ರಸ್ತೆ ಸಂಚಾರ ನಿರ್ಬಂಧದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

 

ರಾಜೇಶ್ ಅರ್ಕುಳ ಎಂಬುವವರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠವು "ವಕ್ಫ್ ತಿದ್ದುಪಡಿ ಪ್ರಕರಣ ಈಗ ಸುಪ್ರೀಂ ಕೋರ್ಟ್‌ನಲ್ಲಿ ಚರ್ಚೆ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಹೆದ್ದಾರಿ ಬಂದ್ ಮಾಡುವುದು ನ್ಯಾಯ ಸಮ್ಮತವಲ್ಲ ಎಂದು ಸರ್ಕಾರ ಅನುಮತಿ ನೀಡಿದ ಸ್ಥಳದಲ್ಲಿ ಮಾತ್ರ ಶಾಂತಿಯುತ ಪ್ರತಿಭಟನೆ ನಡೆಸಬೇಕು ಎಂಬುದಾಗಿ ತೀರ್ಪು ನೀಡಿದೆ.

 

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಹೆಚ್ 73)ಯ ಬಿ.ಸಿ.ರೋಡ್ ನಿಂದ ಪಡೀಲ್ ಮಾರ್ಗದವರೆಗೆ ವಾಹನ ಸಂಚಾರಕ್ಕೆ ವಿಧಿಸಲಾಗಿದ್ದ ನಿರ್ಬಂಧದ ವಿರುದ್ಧ ಅರ್ಜಿ ಸಲ್ಲಿಸಲಾಗಿತ್ತು. 

 

ಪಡೀಲ್, ಕಣ್ಣೂರು, ಅಡ್ಯಾರ್, ಸಹ್ಯಾದ್ರಿ, ಅರ್ಕುಳ ಭಾಗಗಳಲ್ಲಿ ಸಂಚಾರಕ್ಕೆ ತೊಂದರೆ ಉಂಟಾಗುತ್ತದೆ ಎಂಬ ಆಧಾರದ ಮೇಲೆ ಈ ತೀರ್ಪುನ್ನು ನೀಡಿರುತ್ತದೆ 

 

ಈ ನಡುವೆ, ಕರ್ನಾಟಕ ಉಲಮಾ ಸಮನ್ವಯ ಸಮಿತಿಯ ವತಿಯಿಂದ ನಾಳೆ ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಶಾ ಗಾರ್ಡನ್ ಮೈದಾನದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ