ನಿಟ್ಟೆ ಹಾಸ್ಪಿಟಲ್ ಸಮೀಪ ಭೀಕರ ಬೈಕ್ ಅಪಘಾತ ಸಂಭವಿಸಿದ್ದು, KL ರಿಜಿಸ್ಟ್ರೇಶನ್ ಹೊಂದಿದ್ದ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಅಶ್ವಿತ್ ಎಂಬ ಯುವಕ ಗಂಭೀರ ಗಾಯಗೊಂಡಿದ್ದಾನೆ.
ಪ್ರತ್ಯಕ್ಷದರ್ಶಿಗಳ ಹೇಳಿಕೆಯಿಂದ, ಅಪಘಾತದ ತೀವ್ರತೆ ಹೆಚ್ಚಾಗಿದ್ದು, ಸ್ಥಳದಲ್ಲೇ ಅಶ್ವಿತ್ ನಿಗೆ ಗಂಭೀರ ಗಾಯಗಳಾಗಿದ್ದು ತಕ್ಷಣವೇ ಅವರನ್ನು ನಿಟ್ಟೆ ಹಾಸ್ಪಿಟಲ್ ಗೆ ದಾಖಲಿಸಲಾಗಿದೆ ಎಂದಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ಅಪಘಾತದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.