ಮಂಗಳೂರು: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಏ.22ರಂದು ಸಾರ್ವಜನಿಕರ ಭೇಟಿಗೆ ಲಭ್ಯ!

  • 21 Apr 2025 02:55:25 PM


ಮಂಗಳೂರು: ದಕ್ಷಿಣ ಕನ್ನಡದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಏಪ್ರಿಲ್ 22ರಂದು (ಸೋಮವಾರ) ಬೆಳಿಗ್ಗೆ 9 ರಿಂದ 11 ಗಂಟೆಯವರೆಗೆ ಸಾರ್ವಜನಿಕರ ಭೇಟಿಗೆ ಲಭ್ಯವಿರುತ್ತಾರೆ.

 

ಸಾರ್ವಜನಿಕರು ತಮ್ಮ ಅಹವಾಲುಗಳು ಮತ್ತು ಕುಂದು ಕೊರತೆಗಳೊಂದಿಗೆ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಗೆ ಬೇಟಿ ನೀಡಬಹುದು. 

 

ಈ ವೇಳೆ ಸಂಸದರನ್ನು ಖುದ್ದಾಗಿ ಭೇಟಿಯಾಗಿ ತಮ್ಮ ಸಮಸ್ಯೆಗಳನ್ನು ಕುರಿತಾಗಿ ವಿವರಿಸಬಹುದಾಗಿದೆ.

 

ಈ ಮಾಹಿತಿಯನ್ನು ಸಂಸದರು ಕಚೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.