ಎಡನೀರು ಶ್ರೀಗಳ ವಾಹನಕ್ಕೆ ಅಡ್ಡಿ - ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪವೆಲ್ ಖಂಡನೆ

  • 05 Nov 2024 01:25:25 PM

ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ, ಶ್ರೀಮದ್ ಎಡನೀರು ಮಠಾಧೀಶರಾದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಸಂಚರಿಸುತ್ತಿದ್ದ ವೇಳೆ ಅವರ ವಾಹನಕ್ಕೆ ಕಿಡಿಗೇಡಿಗಳು ಅಡ್ಡಿ ಒಡ್ಡಿದ ಘಟನೆಯ ವಿಶ್ವ ಹಿಂದೂ ಪರಿಷತ್ ತೀವ್ರ ಖಂಡನೆ ವ್ಯಕ್ತಪಡಿಸಿದೆ.

ಪೂಜ್ಯ ಸಾಧು ಸಂತರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಈ ರೀತಿಯ ದುಷ್ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿ, ದುಷ್ಕರ್ಮಿಗಳ ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಳ್ಳುವಂತೆ ವಿಶ್ವ ಹಿಂದೂ ಪರಿಷತ್ ಕರ್ನಾಟಕ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪವೆಲ್ ಕೇರಳ ಸರ್ಕಾರಕ್ಕೆ ಅಗ್ರಹವನ್ನು ವ್ಯಕ್ತಪಡಿಸಿದ್ದಾರೆ.