ಪುತ್ತೂರು: ಪುತ್ತೂರು ತಾಲೂಕು ವೈದ್ಯಾಧಿಕಾರಿ ಡಾ. ಆಶಾ ಪುತ್ತೂರಾಯರವರ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಆರೋಪಿಯಾಗಿರುವ ಸಮಾದ್ ಎಂಬ ವ್ಯಕ್ತಿಯನ್ನು ಪೊಲೀಸರು ಕೆಲಕಾಲ ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿರುತ್ತಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರಿನ ವೈದ್ಯರ ಸಂಘದ ಸದಸ್ಯರು ಹಾಗೂ ಹಿಂದೂ ಸಂಘಟನೆಗಳ ಪ್ರಮುಖರು ಠಾಣೆಗೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದಾಗ, “ಬೆಳಿಗ್ಗೆ 8 ಗಂಟೆಯೊಳಗೆ ಆರೋಪಿಯನ್ನು ಮತ್ತೆ ಬಂಧಿಸುತ್ತೇವೆ” ಎಂಬ ಭರವಸೆ ನೀಡಿದ್ದರು.
ಆದರೆ, ಇದೀಗ ನಿಗದಿತ ಸಮಯವಾದರೂ ಸಹ ಆರೋಪಿಯ ಬಂಧನ ನಡೆದಿಲ್ಲ.
ಆದರೆ ಇದೀಗ ಆರೋಪಿ ತನ್ನ ಮನೆಗೆ ಬೀಗ ಹಾಕಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಹಿಂದೂ ಕಾರ್ಯಕರ್ತರು ಇಂದು ಬೆಳಿಗ್ಗೆ 9:30 ಕ್ಕೆ ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಸಲು ಕರೆ ನೀಡಿದ್ದಾರೆ.
ಇಂತಹ ಘಟನೆಗಳನ್ನು ಹೀಗೆ ಬಿಟ್ಟರೆ ನಮ್ಮೂರು ಕಾಶ್ಮೀರ ಆಗೋದರಲ್ಲಿ ಸಂಶಯವಿಲ್ಲ. ತಮ್ಮ ಕೆಲಸ ಕಾರ್ಯಗಳನ್ನು ಬದಿಗಿಟ್ಟು ಹಿಂದೂ ಕಾರ್ಯಕರ್ತರು ಒಟ್ಟಾಗಿ ಇದರ ವಿರುದ್ಧ ಪ್ರತಿಭಟಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪೊಲೀಸರ ಕೈಯಲ್ಲಿದ್ದ ಆರೋಪಿಯನ್ನು ಬಿಡುಗಡೆ ಮಾಡಲು ಯಾರು ಒತ್ತಡ ಹೇರಿದವರು ಎಂಬ ಸತ್ಯ ಬೆಳಕಿಗೆ ಬರಬೇಕು ಎನ್ನುವುದು ಇವರ ಆಗ್ರಹವಾಗಿದೆ.