ಮಂಗಳೂರು: ಬಜ್ಪೆ ಹತ್ಯೆ ಪ್ರಕರಣದಲ್ಲಿ ಸಾವನ್ನಪ್ಪಿದ ಸುಹಾಸ್ ಶೆಟ್ಟಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕಾಗಿ ಬಂಟ್ವಾಳ ಬಿಸಿ ರೋಡ್‌ನಲ್ಲಿ ಸಾವಿರಾರು ಜನರು ಸೇರಿದ್ದರು.
ಕಾರ್ಯಕರ್ತರು, ಸಾರ್ವಜನಿಕರು ಕೂಡಾ ಶ್ರದ್ಧಾಂಜಲಿಯನ್ನು ಅರ್ಪಿಸಿದರು.
ಬಿಸಿ ರೋಡ್ ಬಸ್ ನಿಲ್ದಾಣದ ಸಮೀಪ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಎಲ್ಲಾ ಅಂಗಡಿಗಳು ಸ್ವಯಂ ಪ್ರೇರಿತ ಬಂದ್ ಆಗಿದ್ದವು. ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನಗಳ ಸಂಖ್ಯೆಯೂ ಕಡಿಮೆಯಾಗಿತ್ತು.
ಬಸ್ ಸಂಚಾರ ಇಲ್ಲದುದರಿಂದ ವಿದ್ಯಾರ್ಥಿಗಳು ಮತ್ತು ಹಿರಿಯ ನಾಗರಿಕರಿಗೆ ಸಂಘಟನೆಯ ಕಾರ್ಯಕರ್ತರು ಖಾಸಗಿ ವಾಹನಗಳಲ್ಲಿ ಸಹಾಯ ಮಾಡಿದರು.
ಈ ಸಂದರ್ಭ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಇತರ ನಾಯಕರು ಸ್ಥಳಕ್ಕೆ ಬಂದು ಅಂತಿಮ ದರ್ಶನ ಪಡೆದರು.
ಭದ್ರತೆಗಾಗಿ ಐಜಿ ಅಮಿತ್ ಸಿಂಗ್, ಎಸ್.ಪಿ. ಯತೀಶ್ ಎನ್., ಇನ್ಸ್‌ಪೆಕ್ಟರ್ ಆನಂತಪದ್ಮನಾಭ ಮತ್ತು ಎಸ್.ಐ. ರಾಮಕೃಷ್ಣ ಅವರು ಬಂಟ್ವಾಳದಲ್ಲಿ ಬಂದೋಬಸ್ತ್ ಕೈಗೊಂಡಿದ್ದಾರೆ.