ಮಂಗಳೂರು: ಇಂದು ಪ್ರಕಟವಾದ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯು ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದು ಕೊಂಡಿದೆ. ಹಾಗೂ ಉಡುಪಿ ಜಿಲ್ಲೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ಶೇ. 91.12 ಫಲಿತಾಂಶ ಲಭಿಸಿದ್ದು, ಉಡುಪಿ ಜಿಲ್ಲೆಗೆ ಶೇ. 89.96 ಫಲಿತಾಂಶ ಬಂದಿದೆ.
ರಾಜ್ಯಮಟ್ಟದಲ್ಲಿ ಒಟ್ಟು 22 ವಿದ್ಯಾರ್ಥಿಗಳು ಗರಿಷ್ಠ 625 ಅಂಕಗಳಲ್ಲಿ 625 ಅಂಕಗಳನ್ನು ಪಡೆದು ರ್ಯಾಂಕ್ ಪಡೆದಿರುತ್ತಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶೇ. 8ರಷ್ಟು ಹೆಚ್ಚಿನ ಫಲಿತಾಂಶ ಬಂದಿರುತ್ತದೆ.