ಮಂಗಳೂರು : ಸುಹಾಸ್ ಶೆಟ್ಟಿ ಹತ್ಯೆಯಂತಹ ಘಟನೆಗಳು, ಕರಾವಳಿ ಪ್ರದೇಶದಲ್ಲಿ ಸಂಭವಿಸುತ್ತಿದ್ದು ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೆತ್ತಿಕೊಂಡಿದೆ.
ಮಂಗಳೂರಿಗೆ ಭೇಟಿ ನೀಡಿದ್ದ ಗೃಹ ಸಚಿವ ಜಿ. ಪರಮೇಶ್ವರ್ ಅವರು ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ "ಸ್ಪೆಷಲ್ ಫೋರ್ಸ್" ನಿಯೋಜನೆ ಮಾಡಲು ರಾಜ್ಯ ಸರ್ಕಾರ ಯೋಜನೆ ರೂಪಿಸಿದ್ದು, ಇದು ಜಂಟಿ ನಕ್ಸಲ್ ಫೋರ್ಸ್ ಮಾದರಿಯಲ್ಲಿ ಕಾರ್ಯನಿರ್ವಹಿಸಲಿದೆ ಎಂದು ಅವರು ತಿಳಿಸಿದ್ದಾರೆ.
ಈ ಹೊಸ ಭದ್ರತಾ ಘಟಕ 'ಜಂಟಿ ಕಮ್ಯುನಲ್ ಫೋರ್ಸ್' ರೂಪದಲ್ಲಿ ಕಾರ್ಯನಿರ್ವಹಿಸಲಿದೆ. ಉಡುಪಿ ಹಾಗೂ ದ.ಕ ಜಿಲ್ಲೆಗಳಿಗೆ ಪ್ರತ್ಯೇಕ ಅಧಿಕಾರಿಗಳ ತಂಡವನ್ನು ನೇಮಿಸುವ ಮೂಲಕ ಶೀಘ್ರದಲ್ಲೇ ಈ ಘಟಕವನ್ನು ಸ್ಥಾಪಿಸಲಾಗುತ್ತಿದೆ ಎಂದು ಹೇಳಿದ್ದಾರೆ.