ಮಂಗಳೂರು: ಇತ್ತೀಚೆಗೆ ಮತೀಯ ದ್ವೇಷದಿಂದ ಮುಸ್ಲಿಂ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಗೊಳಗಾದ ಹಿಂದೂ ಮುಖಂಡ ಸುಹಾಸ್ ಶೆಟ್ಟಿಯ ಮನೆಗೆ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರು ಸುಹಾಸ್‌ರ ತಂದೆ-ತಾಯಿ ಹಾಗೂ ಕುಟುಂಬಸ್ಥರನ್ನು ಭೇಟಿಯಾಗಿ ಆಪ್ತವಾಗಿ ಮಾತುನಾಡಿ ಸಾಂತ್ವನ ನೀಡಿದರು.
ಸ್ವಾಮೀಜಿಯವರು ಕುಟುಂಬದ ಸದಸ್ಯರಿಗೆ ಸಾಂತ್ವನ ನೀಡುತ್ತಾ, ಸುಹಾಸ್ ಶೆಟ್ಟಿಯ ಆತ್ಮಕೆ ಶಾಂತಿ ಸಿಗಲಿ. ಇವನು ಧರ್ಮಕ್ಕಾಗಿ ಜೀವ ತ್ಯಾಗ ಮಾಡಿದ ವೀರ. ಇಂತಹ ಕ್ರೂರ ಘಟನೆಗಳು ಪುನರಾವೃತ್ತಿಯಾಗದಂತೆ ನಾವು ಸಾಮಾಜಿಕವಾಗಿ ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದರು.
ಇದೇ ವೇಳೆ ಸ್ವಾಮೀಜಿಯವರು ರಾಜ್ಯ ಸರ್ಕಾರ ಹಾಗೂ ತನಿಖಾ ಸಂಸ್ಥೆಗಳಿಗೆ ಮನವಿ ಮಾಡಿ, ಆರೋಪಿಗಳನ್ನು ಶೀಘ್ರದಲ್ಲಿ ಬಂಧಿಸಿ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಹಿಂದು ಜಾಗರಣ ವೇದಿಕೆಯ ದಕ್ಷಿಣ ಪ್ರಾಂತ ಪ್ರಮುಖರಾಗಿರುವ ಪ್ರಶಾಂತ್ ಕೆಂಪುಗುಡ್ಡೆ, ಗ್ರಾಮ ಪಂಚಾಯತ್ ಅಧ್ಯಕ್ಷ ಅಜಿತ್ ಶೆಟ್ಟಿ, ಶ್ರೀ ಕ್ಷೇತ್ರ ಕಾರಿಂಜ ವ್ಯವಸ್ಥಾಪನ ಸಮಿತಿಯ ನಿಕಟಪೂರ್ವ ಅಧ್ಯಕ್ಷರಾದ ಚಂದ್ರಶೇಖರ ಶೆಟ್ಟಿ ಉಪಸ್ಥಿತರಿದ್ದರು