ಪುತ್ತೂರು: ಉಪ್ಪಿನಂಗಡಿ ಸಮೀಪದ ಉರುವಾಲು ಗ್ರಾಮದ ಕುಪ್ಪೆಟ್ಟಿ ಎಂಬಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಗೂಡ್ಸ್ ವಾಹನವನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ, ಮಹತ್ವದ ಕಾರ್ಯಚರಣೆ ನಡೆಸಿದ್ದಾರೆ.
ಕಾನೂನು ಪ್ರಮಾಣಪತ್ರಗಳಿಲ್ಲದೆ ಸಾಗಿಸಲಾಗುತ್ತಿದ್ದ ನಾಲ್ಕು ಜಾನುವಾರುಗಳನ್ನು ಸ್ಥಳದಲ್ಲೇ ವಶಕ್ಕೆ ಪಡೆಡಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ವಾಹನ ಚಾಲಕ ಜಯಂತ್ ಗೌಡನನ್ನು ಪೊಲೀಸರು ಬಂಧಿಸಿದ್ದಾರೆ.
ತನಿಖೆಯ ವೇಳೆ, ಆತನು ಕುಪ್ಪೆಟ್ಟಿಯ ಬದ್ರುದ್ದೀನ್ ಎಂಬಾತನಿಗೆ ಜಾನುವಾರುಗಳನ್ನು ಸಾಗಿಸುತ್ತಿದ್ದ ಎಂಬುದಾಗಿ ತಿಳಿದು ಬಂದಿದೆ.
ಪೊಲೀಸ್ ಇಲಾಖೆಯ ತಕ್ಷಣದ ಕ್ರಮದಿಂದಾಗಿ ಜಾನುವಾರು ಕಳ್ಳಸಾಗಣೆಯ ಮತ್ತೊಂದು ಪ್ರಯತ್ನ ವಿಫಲವಾಗಿದೆ.
ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದು, ಮೂವರ ವಿರುದ್ಧ ಕೇಸು ದಾಖಲಿಸಲಾಗಿದೆ.
ಇಂತಹ ಸಂಶಯಾಸ್ಪದ ಚಟುವಟಿಕೆಯನ್ನು ಗಮನಿಸಿದಲ್ಲಿ ಸಾರ್ವಜನಿಕರು ತಕ್ಷಣ ಪೊಲೀಸರಿಗೆ ತಿಳಿಸಿ ಸಹಕಾರ ನೀಡಬೇಕೆಂದು ತಿಳಿಸಿದ್ದಾರೆ.