ಪುತ್ತೂರು: ಪುತ್ತೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಕೂವೆತ್ತಿಲ ಸಮೀಪ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ.
ಮಾಣಿ ಕಡೆಯಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ, ಪುತ್ತೂರಿನಿಂದ ಮಂಗಳೂರಿನ ಕಡೆಗೆ ಸಾಗುತ್ತಿದ ಸರಕಾರಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಬೈಕ್‌ನಲ್ಲಿದ್ದ ಇಬ್ಬರೂ ಸವಾರರು ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಯಿತು.
ಆದರೆ, ಅವರಲ್ಲಿ ಒಬ್ಬರು ಆಸ್ಪತ್ರೆ ತಲುಪುವಷ್ಟರಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಗಾಯಗೊಂಡ ಹಾಗೂ ಮೃತಪಟ್ಟವರು ಬಂಟ್ವಾಳ ತಾಲ್ಲೂಕಿನ ನರಿಕೊಂಬು ಗ್ರಾಮದ ನಿವಾಸಿಗಳೆಂಬ ಮಾಹಿತಿ ಲಭಿಸಿದೆ.
ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿದ್ದಾರೆ. ಹಾಗೂ ಮುಂದಿನ ತನಿಖೆ ನಡೆಸುತ್ತಿದ್ದಾರೆ.