ಭಾರತೀಯ ಸೇನೆ ಇತ್ತೀಚೆಗೆ ಇಂಜಿನಿಯರಿಂಗ್ ಪದವಿದಾರರಿಗಾಗಿ ಹೊಸ ನೇಮಕಾತಿ ಪ್ರಕ್ರಿಯೆ ಘೋಷಿಸಿದೆ. ಈ ನೇಮಕಾತಿಯಲ್ಲಿ ಯಾವುದೇ ಲಿಖಿತ ಪರೀಕ್ಷೆ ಇರದೇ ನೇರ ಸಂದರ್ಶನ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಲೆಫ್ಟಿನೆಂಟ್ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವರ್ಷಕ್ಕೆ ₹17–18 ಲಕ್ಷಗಳ ಪ್ಯಾಕೇಜ್ ಒದಗಿಸಲಾಗುವುದು. ಇಂಡಿಯನ್ ಆರ್ಮಿಯಲ್ಲಿ ಅಧಿಕಾರಿ ಹುದ್ದೆಯಲ್ಲಿ ಸೇವೆ ಸಲ್ಲಿಸಲು ಬಯಸುವ ಅಂತಿಮ ವರ್ಷದ ಬಿ.ಟೆಕ್ ವಿದ್ಯಾರ್ಥಿಗಳು ಹಾಗೂ ಪದವಿ ಪೂರ್ಣಗೊಳಿಸಿದವರು ಅರ್ಜಿ ಸಲ್ಲಿಸಬಹುದು.
ಈ ಅವಕಾಶವನ್ನು ನಮ್ಮ ಸ್ನೇಹಿತರು, ಸಂಬಂಧಿಕರು ಅಥವಾ ಪರಿಚಯದ ಬಿ.ಟೆಕ್ ವಿದ್ಯಾರ್ಥಿಗಳಿಗೂ ತಲುಪಿಸೋಣ.