ಮಂಗಳೂರು: ರೈಲುಪಯಣದ ದಾರಿ ಮಧ್ಯೆ ಹೃದಯಾಘಾತದಿಂದ ವ್ಯಕ್ತಿಯ ಸಾವು!

  • 18 May 2025 04:29:16 PM


ಮಂಗಳೂರು: ಮಂಗಳೂರಿನ ರೈಲ್ವೇ ನಿಲ್ದಾಣದಲ್ಲೊಂದು ಆಘಾತಕಾರಿ ಘಟನೆ ಸಂಭವಿಸಿದೆ. ಮಂಗಳೂರು-ಚೆನ್ನೈ ಮೇಲ್ ಎಕ್ಸ್‌ಪ್ರೆಸ್ ರೈಲಿನ ಜನರಲ್ ಕೋಚ್‌ನಲ್ಲಿ ಪ್ರಯಾಣಿಸುತ್ತಿದ್ದ ಅಂದಾಜು 45 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ. 

 

ಮೇ 17ರಂದು ಮಧ್ಯಾಹ್ನ 3:30ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದ್ದು ವ್ಯಕ್ತಿಯ ಸ್ಥಿತಿ ಗಂಭೀರವಾಗಿರುವುದನ್ನು ಗಮನಿಸಿದ ಆರ್‌ಪಿಎಫ್ ಇನ್ಸ್‌ಪೆಕ್ಟರ್ ಮನೋಜ್ ಕುಮಾರ್ ಯಾದವ್ ಹಾಗೂ ಸಿಬ್ಬಂದಿಗಳು ತಕ್ಷಣವೇ ಸಿಪಿಆರ್ ನೀಡಿ ವೈದ್ಯಕೀಯ ಸಹಾಯ ನೀಡುವ ಪ್ರಯತ್ನ ನಡೆಸಿದರು.

 

ಬಳಿಕ ಅವರನ್ನು ತಕ್ಷಣವೇ ಮಂಗಳೂರು ನಗರದ ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಯಿತು ಆದರೂ ಚಿಕಿತ್ಸೆ ಫಲಕಾರಿಯಾಗದೆ ಸಂಜೆ 4 ಗಂಟೆಗೆ ಅವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೃತ ವ್ಯಕ್ತಿಯ ಗುರುತು ಇನ್ನೂ ತಿಳಿದುಬಂದಿಲ್ಲ.