ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಕರಣಗಳ ಏರಿಕೆ: ಆರೋಗ್ಯ ಇಲಾಖೆಯಿಂದ ಹೊಸ ಮಾರ್ಗಸೂಚಿ ಬಿಡುಗಡೆ!

  • 24 May 2025 05:28:32 PM


ಬೆಂಗಳೂರು: ಕೊರೊನಾ ವೈರಸ್ ಸೋಂಕು ಪ್ರಕರಣಗಳು ರಾಜ್ಯದಲ್ಲಿ ಮತ್ತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಹೊಸ ಕೋವಿಡ್-19 ಮಾರ್ಗಸೂಚಿಯನ್ನು ಪ್ರಕಟಿಸಿದೆ.

 

ರಾಜ್ಯದಲ್ಲಿ ಪ್ರಸ್ತುತ 35 ಸಕ್ರಿಯ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 32 ಪ್ರಕರಣಗಳು ಬೆಂಗಳೂರಿನಲ್ಲಿ ಕಂಡುಬಂದಿವೆ.

 

 ಪರಿಸ್ಥಿತಿ ನಿಯಂತ್ರಣದಲ್ಲಿದರೂ ಸಹ ಸೋಂಕು ಹರಡುವುದನ್ನು ತಡೆಗಟ್ಟಲು ಮುನ್ನೆಚ್ಚರಿಕೆಯನ್ನು ಕೈಗೊಳ್ಳುವುದು ಅತ್ಯಗತ್ಯವಾಗಿರುತ್ತದೆ.

 

ಕಳೆದ 20 ದಿನಗಳಲ್ಲಿ ಪ್ರಕರಣಗಳ ಸಂಖ್ಯೆ ಏಕಾಏಕಿ ಏರಿಕೆಯಾಗಿರುತ್ತದೆ ಆದ್ದರಿಂದ ಇದನ್ನು ಗಮನದಲ್ಲಿಟ್ಟುಕೊಂಡು ಮಕ್ಕಳೂ, ವೃದ್ಧರೂ ಹಾಗೂ ದೀರ್ಘಕಾಲೀನ ಆರೋಗ್ಯ ಸಮಸ್ಯೆ ಎದುರಿಸುತ್ತಿರುವವರೂ ಹೆಚ್ಚಿನ ಜಾಗ್ರತೆ ವಹಿಸಬೇಕು ಎಂದು ಇಲಾಖೆ ಸಲಹೆ ನೀಡಿದೆ.

 

2025ರಲ್ಲಿ ಈವರೆಗೆ ಕೋವಿಡ್ ಸಂಬಂಧಿತ ಯಾವುದೇ ಸಾವುಗಳು ವರದಿಯಾಗಿಲ್ಲ. ಆದರೆ, ವೈರಸ್ ಮತ್ತಷ್ಟು ಹರಡುವ ಮೊದಲು ತಡೆಯುವುದು ಮುಖ್ಯವಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

 

ಹೊಸದಾಗಿ ಪ್ರಕಟಿಸಿದ ಮಾರ್ಗಸೂಚಿಯ ಪ್ರಕಾರ:

 

ಗರ್ಭಿಣಿಯರು, ಮಕ್ಕಳು ಮತ್ತು ರೋಗನಿರೋಧಕ ಶಕ್ತಿ ಕಡಿಮೆ ಇರುವವರು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಲ್ಲಿ ಫೇಸ್ ಮಾಸ್ಕ್‌ ಧರಿಸುವುದು ಕಡ್ಡಾಯ.

 

ಸಾರ್ವಜನಿಕರು – ಕೈಗಳ ನೈರ್ಮಲ್ಯ ಕಾಪಾಡಿಕೊಳ್ಳುವುದು ಮತ್ತು ಹ್ಯಾಂಡ್ ಸ್ಯಾನಿಟೈಸರ್‌ಗಳನ್ನು ನಿಯಮಿತವಾಗಿ ಬಳಸಬೇಕು.